Ad Widget

ದೇವ : ಕ್ರೀಡೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ

ಗೆಳೆಯರ ಬಳಗ ದೇವ, ಜ್ಯೋತಿಲಕ್ಷ್ಮಿ ಮಹಿಳಾ ಮಂಡಲ ದೇವ ಇವುಗಳ ಜಂಟಿ ಆಶ್ರಯದಲ್ಲಿ ಕ್ರೀಡೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮ ಜ. 2 ರಂದು ದೇವ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಭೂಸೇನಾ ಯೋಧ ವಿನಯಕುಮಾರ್ ಹಿರಿಯಡ್ಕ ಉದ್ಘಾಟಿಸಿದರು.

. . . . . . . . .

ಪುರುಷರಿಗೆ, ಮಹಿಳೆಯರಿಗೆ,ಸಾರ್ವಜನಿಕ ಮಕ್ಕಳಿಗೆ, ಶಾಲಾಮಕ್ಕಳಿಗೆ, ಅಂಗನವಾಡಿ ಮಕ್ಕಳಿಗೆ ಆಟೋಟ ಸ್ಪರ್ಧಾಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗೆಳೆಯರ ಬಳಗದ ಅಧ್ಯಕ್ಷರಾದ ಯೋಗೀಶ್ ದೇವ ವಹಿಸಿದ್ದರು.

. . . . . . .

ವೇದಿಕೆಯಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಲೋಚನಾ ದೇವ, ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ರಮೇಶ ಪಡ್ಪು, ಸುಳ್ಯ ಎ ಪಿ ಎಂ ಸಿ ಅಧ್ಯಕ್ಷರಾದ ವಿನಯಕುಮಾರ್ ಮುಳುಗಾಡು, ಸುಳ್ಯ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ತೇಜಾವತಿ ಗಿರೀಶ್ ಪಡ್ದಂಬೈಲ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೇವ ಒಕ್ಕೂಟದ ಅಧ್ಯಕ್ಷ ನಳಿನಾಕ್ಷ ಹಿರಿಯಡ್ಕ, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕಿ ಪ್ರತಿಭಾ ಕಾಯರ, ಜ್ಯೋತಿಲಕ್ಷ್ಮಿ ಮಹಿಳಾ ಮಂಡಲದ ಅಧ್ಯಕ್ಷರಾದ ಕವಿತಾ ಜನಾರ್ದನ ಕುತ್ಯಾಳ, ಗೆಳೆಯರ ಬಳಗದ ಕಾರ್ಯದರ್ಶಿ ಉಮೇಶ್ ದೇವ, ಮಹಿಳಾ ಮಂಡಳದ ಕಾರ್ಯದರ್ಶಿ ರೇಣುಕಾ ವಿಶ್ವನಾಥ ಚಿರೆಕಲ್ಲು, ಅಂಗನವಾಡಿ ಕಾರ್ಯಕರ್ತೆ ಲತಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಮಾಜಿ ಅಧ್ಯಕ್ಷ, ಹಾಲಿ ಎ ಪಿ ಎಂ ಸಿ ಅಧ್ಯಕ್ಷರಾದ ವಿನಯಕುಮಾರ್ ಮುಳುಗಾಡು ಅವರಿಗೆ ಗೆಳೆಯರ ಬಳಗದ ವತಿಯಿಂದ ಅಭಿನಂದಿಸಲಾಯಿತು. ತೀರ್ಥೇಶ್ ಪಾರೆಪ್ಪಾಡಿ ಸ್ವಾಗತಿಸಿ, ಮುಕುಂದ ಹಿರಿಯಡ್ಕ ವಂದಿಸಿದರು. ಕಾರ್ತಿಕ್ ದೇವ ಕಾರ್ಯಕ್ರಮ ನಿರೂಪಿಸಿದರು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading