ಸುಳ್ಯ ನಗರ ಪಂಚಾಯತ್ ಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಟೇಬಲ್ ಗಳಲ್ಲಿ ಕಡತಗಳ ರಾಶಿ ಕಂಡು ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಜ.14 ರಂದು ನಡೆದಿದೆ.
ನಗರ ಪಂಚಾಯತ್ ಕಚೇರಿಯ ಅವ್ಯವಸ್ಥೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ನಗರ ಪಂಚಾಯತ್ ಮುಖ್ಯಾಧಿಕಾರಿ, ಇಂಜಿನಿಯರ್, ಆರೋಗ್ಯಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ತೀವ್ರ ತರಾಟಗೆತ್ತಿಕೊಂಡರು. ಹಾಗೂ ನಗರ ಪಂಚಾಯತ್ ಅವರಣದ ಬಳಿ ಇದ್ದ ಕಸದರಾಶಿಯ ಬಗ್ಗೆ ಪಂಚಾಯತ್ ಆಡಳಿತದ ಮಾಹಿತಿ ಪಡೆದುಕೊಂಡರು ಇದರ ಬಗ್ಗೆ ಸಭೆಯಲ್ಲಿ ಚರ್ಚಿಸುತ್ತೇನೆ ಎಂದು ಹೇಳಿದರು. ಅಧಿಕಾರಿ ಮತ್ತು ಸಿಬ್ಬಂದಿಗಳ ಚೇಂಬರ್‌ಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಅಸಮರ್ಪಕ ವ್ಯವಸ್ಥೆಯ ಬಗ್ಗೆ ತೀವ್ರ ತರಾಟೆಗೆತ್ತಿಕೊಂಡರು. ಜಿಲ್ಲಾಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳಿಂದ ಸಮರ್ಪಕ ಉತ್ತರ ನೀಡಲು ಸಾಧ್ಯವಾಗಿಲ್ಲ. ಅಧಿಕಾರಿಗಳ,ಸಿಬ್ಬಂದಿಗಳ ಚಳಿ ಬಿಡಿಸಿದರು. ಸಾರ್ವಜನಿಕರಿಂದಲೂ ಕೆಲವು ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು ನಗರ ಪಂಚಾಯತ್ ಆಡಳಿತಕ್ಕೆ ಬಿಸಿ ಮುಟ್ಟಿಸಿದರು. ಬಳಿಕ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ನಗರ ಪಂಚಾಯತ್ ಅಧ್ಯಕ್ಷರು ವಿನಯಕುಮಾರ್ ಕಂದಡ್ಕ, ತಹಶೀಲ್ದಾರ್ ಕು.ಅನಿತಾಲಕ್ಷ್ಮಿ, ನಗರ ಕೋಶ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಕಂದಾಯ ಅಧಿಕಾರಿ ಕೊರಗಪ್ಪ ಹೆಗ್ಡೆ, ಸಹಾಯಕ ಕಾರ್ಯಪಾಲಕ ಅಭಿಯಂತ ಅರುಣ್ ಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.