Ad Widget

ಹರಿಹರ ಪಲ್ಲತ್ತಡ್ಕ :- ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಧನುಪೂಜೆ ಸಂಪನ್ನ

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದಿನಾಂಕ 16-12-2021 ರಿಂದ ದಿನಾಂಕ 14-01-2022 ರವರೆಗೆ ದಿನನಿತ್ಯ ಪ್ರಾತಃಕಾಲ 5:00 ಗಂಟೆಗೆ ಧನುಪೂಜೆ ನಡೆಯಿತು. ದಿನಾಂಕ 14-01-2022 ರಂದು ಪ್ರಾತಃಕಾಲ 4:00 ಗಂಟೆಯಿಂದ ಉಧ್ಯಾಪನ ಧನುಪೂಜೆ ಹಾಗೂ ಮದ್ಯಾಹ್ನ ವನಶಾಸ್ತವೇಶ್ವರನ ವಾರ್ಷಿಕ ಪೂಜೆ ಹಾಗೂ ವನಭೋಜನ ನಡೆಯಿತು.
ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ದೇವಸ್ಥಾನದ ಅರ್ಚಕರು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!