ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16 ಆದಿತ್ಯವಾರದಂದು ಆರಂಭಗೊಂಡಿದ್ದು ಪೂರ್ವಾಹ್ನ ದೇವತಾ ಪ್ರಾರ್ಥನೆ ನಡೆದು, ಉಗ್ರಾಣ ಮುಹೂರ್ತ ನೆರವೇರಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ. ಪದ್ಮನಾಭ ಶೆಟ್ಟಿ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಕುಮಾರಮಂಗಲ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ.ಬಿ, ಪಿ.ಜಗನ್ನಾಥ ರೈ, ದಾಮೋದರ ನಾಯ್ಕ, ನಾರಾಯಣ.ಕೆ, ಶ್ರೀಮತಿ ಭಾಗ್ಯಲಕ್ಷ್ಮೀ, ಶ್ರೀಮತಿ ಯಶೋಧ.ಎ.ಎಸ್ ಮತ್ತು ಸಿಬ್ಬಂದಿ ವಸಂತ ಪೆರುವಾಜೆ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
ಜಾತ್ರಾ ಮಹೋತ್ಸವವು ಜ.21 ಶುಕ್ರವಾರದ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.