ಸುಬ್ರಹ್ಮಣ್ಯ, ಜ.17 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ಸೋಮವಾರ ಬೇಟಿ ನೀಡಿ ಶ್ರೀ ದೇವರ ದರುಶನ ಪಡೆದರು. ಈ ಸಂದರ್ಭದಲ್ಲಿ ಸಚಿವರನ್ನು ಸಚಿವ ಎಸ್.ಅಂಗಾರ ಅವರು ದೇವಳದ ವತಿಯಿಂದ ಸ್ವಾಗತಿಸಿದರು.
ಸಚಿವ ಸಿ.ಸಿ. ಪಾಟೀಲ್ ದೇವಸ್ಥಾನದ ಆಡಳಿತ ಕಛೇರಿ ಸಭಾಂಗಣದಲ್ಲಿ ದೇವಸ್ಥಾನದ ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಉಪಸ್ಥಿತಿಯಲ್ಲಿ ಸಭೆ ನಡೆಸಿದರು. ದೇವಳದ ಮಾಸ್ಟರ್ ಪ್ಲಾನ್ ಕಾಮಗಾರಿ ಬಗ್ಗೆ ಮಾಹಿತಿ ಪಡೆದು, ದಾಖಲಾತಿ ಪರಿಶೀಲನೆ ನಡೆಸಿದರು. ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಸಮಸ್ಯೆ, ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಈ ಸಂದರ್ಭದಲ್ಲಿ ಪ್ರಮುಖರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ – ಐನೆಕಿದು – ಹರಿಹರ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಚಿವರಿಗೆ ಮನವಿ ಸಲ್ಲಿಸಲಾಗಿದ್ದು, ಸಚಿವರು ಅನುದಾನದ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ರಾಂ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಮಾಸ್ಟರ್ ಪ್ಲಾನ್ ಸಮಿತಿಯ ಮನೋಜ್ ಸುಬ್ರಹ್ಮಣ್ಯ, ಕಿಶೋರ್ ಕುಮಾರ್ ಕುಜುಗೋಡು, ಪ್ರಮುಖರಾದ ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ರಾಜೇಶ್ ಎನ್.ಎಸ್, ದಿನೇಶ್ ಸಂಪ್ಯಾಡಿ, ಜಯಪ್ರಕಾಶ್, ಶ್ರೀಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ