ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ “ಅಯ್ಯನಕಟ್ಟೆ ಜಾತ್ರೆ” ಜ.26 ಬುಧವಾರದಿಂದ ಆರಂಭಗೊಳ್ಳಲಿದ್ದು, ಜ.25 ಮಂಗಳವಾರದಂದು ಹಸಿರು ಕಾಣಿಕೆ ಸಮರ್ಪಣೆ ನಡೆಯಲಿದೆ. ಸಂಜೆ ಗಂಟೆ 5.00ಕ್ಕೆ ಸರಿಯಾಗಿ ಬಾಳಿಲದಲ್ಲಿನ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಮಹಾದ್ವಾರದ ಬಳಿಯಿಂದ ಹೊರಟು ಮೂರುಕಲ್ಲಡ್ಕದಲ್ಲಿನ ಶ್ರೀ ಇಷ್ಟದೇವತಾ ಉಳ್ಳಾಕುಲು ಸನ್ನಿಧಾನಕ್ಕೆ ವೈಭವದ ಶೋಭಾಯಾತ್ರೆಯ ಮೂಲಕ ಹಸಿರು ಕಾಣಿಕೆಯನ್ನು ತರಲಾಗುವುದು. ಈ ಕಾರ್ಯಕ್ರಮದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಭಗವದ್ಭಕ್ತರು ಭಾಗವಹಿಸುವಂತೆ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ(ರಿ.) ಮೂರುಕಲ್ಲಡ್ಕ ವತಿಯಿಂದ ವಿನಂತಿಸಲಾಗಿದೆ.
ಜಾತ್ರೋತ್ಸವವು ಜ.26 ಬುಧವಾರದಿಂದ ಜ.29 ಶನಿವಾರದ ವರೆಗೆ ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.