ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸರಕಾರಿ ಪ್ರೌಢಶಾಲೆ ಎಣ್ಮೂರು ವತಿಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ ಜ. 24 ರಂದು ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಡಾ|ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪೆರುವಾಜೆ ಬೆಳ್ಳಾರೆ ಇಲ್ಲಿನ ಸಹಾಯಕ ಪ್ರಾಧ್ಯಾಪಕಿ ಡಾ| ಸುಪ್ರಿಯಾ.ಪಿ.ಆರ್ ಹೆಣ್ಣು ಮಕ್ಕಳ ಆರೋಗ್ಯ, ಶಿಕ್ಷಣ, ದಿನದ ಮಹತ್ವ ಮತ್ತು ರಕ್ಷಣೆಯ ಬಗ್ಗೆ ಉಪನ್ಯಾಸ ನೀಡಿದರು. ಹೆಣ್ಣು ತಾಯಿಯಾಗಿ,ಮಗಳಾಗಿ, ಸೊಸೆಯಾಗಿ, ಹಲವು ಪಾತ್ರಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದ್ದು ಅವಳ ತ್ಯಾಗವನ್ನು ಸಮಾಜ ಗೌರವಿಸಬೇಕು ಎಂದು ಹೇಳಿದರು.
ಸ್ವಯಂ ಸಾಧನೆಯ ಮೂಲಕ ಎತ್ತರಕ್ಕೆ ಬೆಳೆದು ಕುಟುಂಬ ಮತ್ತು ವೃತ್ತಿ ಜೀವನದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿಸುತ್ತಿರುವ ಶಿಕ್ಷಕಿ ಶ್ರೀಮತಿ ರಮ್ಯಾ.ಕೆ.ಆರ್. ಇವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೀತಲ್ ಯು.ಕೆ.ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಾಜದಲ್ಲಿ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆದು ಸ್ವತಂತ್ರರಾಗಿ ಜೀವನ ನಡೆಸಬೇಕು ಎಂದು ತಿಳಿಸಿದರು. ಸ್ಕೌಟ್ ಮಾಸ್ಟರ್ ಶ್ರೀ ರಾಮಚಂದ್ರ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಶ್ರೀಮತಿ ದಿವ್ಯಾ.ಎಂ.ಕೆ.ಸ್ವಾಗತಿಸಿ, ಶ್ರೀಮತಿ ಸಾವಿತ್ರಿ.ಕೆ.ವಂದಿಸಿದರು. ಸ್ಕೌಟ್ಸ್ ಮಾಸ್ಟರ್ ಲಿಂಗಪ್ಪ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.