
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಎಲಿಮಲೆ ಉಪಕೇಂದ್ರ ವತಿಯಿಂದ ಮಾವಿನಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು. ಕ್ಯಾನ್ಸರ್ ಜಾಗೃತಿ ಬಗ್ಗೆ ಸಮುದಾಯ ಆರೋಗ್ಯ ಅಧಿಕಾರಿ ಕು.ಮೋನಿಷಾ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಾಜೇಶ್ವರಿ ಮಣಿಕಂಠ ಮಾವಿನಕಟ್ಟೆ, ಎಸ್ ಡಿ. ಎಂ. ಸಿ ಅಧ್ಯಕ್ಷೆ ಸಂಧ್ಯಾ ,ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ, ದೇವಚಳ್ಳ ಶಾಲೆಯ ಶಿಕ್ಷಕಿ ರೂಪವಾಣಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು. ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಮ್ ಕಣೆಮರಡ್ಕ ರವರು ಸ್ವಾಗತಿಸಿ ನಿರೂಪಿಸಿದರು.