ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು ಇಂದು(ಫೆ.05) ಬೆಳಗ್ಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ರಾತ್ರಿ ದೇವಳದಲ್ಲಿ ದೀಪೋತ್ಸವ, ಮಹಾಪೂಜೆ ನಡೆಯಿತು.
ಬಳಿಕ ಶ್ರೀ ದೇವರ ಬಲಿ ಹೊರಟು ವಸಂತಕಟ್ಟೆ ಪೂಜೆ, ಕಾಜುಕುಜುಂಬ ಹಾಗೂ ಶಿರಾಡಿ ದೈವಗಳ ನರ್ತನ ಸೇವೆ ನಡೆದು ಶ್ರೀ ದೇವರ ಉತ್ಸವ ನಡೆಯಿತು. ನಂತರ ಅನ್ನಸಂತರ್ಪಣೆ ನಡೆಯಿತು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ, ಧರ್ಮಸ್ಥಳ ಇವರಿಂದ ಯಕ್ಷಗಾನ ಬಯಲಾಟ ಸಾಮ್ರಾಟ್ ನಹುಷೇಂದ್ರ ಪ್ರದರ್ಶನಗೊಂಡಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಉತ್ಸವ ಸಮಿತಿ ಸಂಚಾಲಕರು, ಸರ್ವ ಸದಸ್ಯರು, ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿ ವರ್ಗ, ಊರ-ಪರವೂರ ಭಗವದ್ಭಕ್ತರು ಉಪಸ್ಥಿತರಿದ್ದರು.