Ad Widget

ಕಾಂಚೋಡು ಜಾತ್ರೋತ್ಸವ- ವೈಭವದ ಹಸಿರು ಕಾಣಿಕೆ ಮೆರವಣಿಗೆ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಅಣ್ಣಪ್ಪಾದಿ ದೈವಗಳ ನೇಮೋತ್ಸವಗಳು ಇಂದಿನಿಂದ ಆರಂಭಗೊಂಡು ಫೆ. 14ರವರೆಗೆ ನಡೆಯಲಿದ್ದು ಫೆ.11ರಂದು(ಇಂದು) ಊರ ಭಕ್ತಾದಿಗಳಿಂದ ಮತ್ತು ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಿಂದ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ವೈಭವದ ಮೆರವಣಿಗೆಯ ಮೂಲಕ ನಡೆಯಿತು.

. . . . . . . . .

ದೇವಸ್ಥಾನದ ಧರ್ಮದರ್ಶಿಗಳಾದ ಪರಮೇಶ್ವರಯ್ಯ ಕಾಂಚೋಡು ತೆಂಗಿನಕಾಯಿ ಒಡೆಯುವ ಮೂಲಕ ಹಸಿರು ಹೊರೆಕಾಣಿಕೆಗೆ ಚಾಲನೆ ನೀಡಿದರು. ಧರ್ಮದರ್ಶಿ ಪರಶುರಾಮ ಕಾಯಾರ ದೊಡ್ಡಮನೆ, ಸಮಿತಿಯ ಉಪಾಧ್ಯಕ್ಷ ಜೆ. ನಾರಾಯಣ ಜೋಗಿಬೆಟ್ಟು, ಉತ್ಸವ ಸಮಿತಿ ಅಧ್ಯಕ್ಷ ಗಂಗಾಧರ ಎಂ, ಪ್ರಧಾನ ಕಾರ್ಯದರ್ಶಿ ಹರ್ಷ ಜೋಗಿಬೆಟ್ಟು, ಕೋಶಾಧಿಕಾರಿ ಲೋಕೇಶ್ ಬೆಳ್ಳಿಗೆ, ಸಹಾಯಕ ಮೋಹನ ಗುಂಡಿಹಿತ್ಲು, ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು, ಸತ್ಯನಾರಾಯಣ ಭಟ್ ಕಾಂಚೋಡು, ಶಂಕರನಾರಾಯಣ ಭಟ್ ಶೇಡಿಕರೆ, ರಾಧಾಕೃಷ್ಣ ಕೊಳೆಂಚಿಕೋಡಿ, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು, ನಿರ್ದೇಶಕ ವಿಶ್ವನಾಥ ಪರವ ಸೇರಿದಂತೆ ವಿವಿಧ ಸಮಿತಿಗಳ ಸಂಚಾಲಕರು, ಸದಸ್ಯರು, ಊರ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉತ್ಸವ ಸಮಿತಿಯ ಮಾಜಿ ಅಧ್ಯಕ್ಷ ರವೀಂದ್ರ ರೈ ಟಪ್ಪಾಲುಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಮೆರವಣಿಗೆಯುದ್ದಕ್ಕೂ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರ್ಯ ಇವರಿಂದ ಚೆಂಡೆವಾದನ, ಸ್ಥಳೀಯ ಭಜನಾ ಸಂಘಟನೆಗಳ ಸದಸ್ಯರಿಂದ ಕುಣಿತ ಭಜನೆ ನಡೆಯಿತು.

. . . . . . .

ಫೆ. 12ರಂದು ಬೆಳಿಗ್ಗೆಯಿಂದ ವಿವಿಧ ವೈದಿಕ ಕಾರ್ಯಗಳು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ಮಂಜುನಾಥ ಸ್ವಾಮಿ ಮತ್ತು ಅಮ್ಮನವರ ಬಲಿ ಉತ್ಸವ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಫೆ. 13ರಂದು ಬೆಳಿಗ್ಗೆಯಿಂದ ವೈದಿಕ ಕಾರ್ಯಗಳು, ಪೂ. 10.00ರಿಂದ ಶ್ರೀ ಮಂಜುನಾಥ ಸ್ವಾಮಿ ಮತ್ತು ಅಮ್ಮನವರ ದರ್ಶನ ಬಲಿ ಉತ್ಸವ, ಗಂಧ ಪ್ರಸಾದ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ, ಸಂಜೆ ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ, ಕನ್ಯಾಕುಮಾರಿ, ದೈವಗಳ ಭಂಡಾರ ತೆಗೆಯುವುದು, ರಾತ್ರಿ ಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ಬಳಿಕ ಅಣ್ಣಪ್ಪ ಮಾಡದಲ್ಲಿ ಧರ್ಮದೈವಗಳ ನೇಮೋತ್ಸವ, ಕಾಣಿಕೆ, ಪ್ರಸಾದ ವಿತರಣೆ ಜರಗಲಿದೆ. ಫೆ. 14ರಂದು ಬೆಳಿಗ್ಗೆ ರುದ್ರಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ, ಕಲ್ಲೇರಿತ್ತಾಯ ಭಂಡಾರ ತೆಗೆದು ಕಾಯಾರ ಮಾಡದಲ್ಲಿ ನೇಮೋತ್ಸವ, ಸಂಜೆ, ಅಣ್ಣಪ್ಪ ಸ್ವಾಮಿ, ಪಂಜುರ್ಲಿ, ಗುಳಿಗ ದೈವಗಳ ಭಂಡಾರ ತೆಗೆಯುವುದು, ರಾತ್ರಿ 8.30ರಿಂದ ರಂಗಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ, ರಾತ್ರಿ 10.00ರಿಂದ ಅಣ್ಣಪ್ಪ ಸ್ವಾಮಿ ಮಾಡದಲ್ಲಿ ಅಣ್ಣಪ್ಪ ಸ್ವಾಮಿ, ಪಂಜುರ್ಲಿ, ದೈವಗಳ ನೇಮ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಬೆಳಗಿನ ಜಾವ ದೇವಾಲಯದ ವಠಾರದಲ್ಲಿ ಶ್ರೀ ಗುಳಿಗ ದೈವದ ನೇಮ, ಪ್ರಸಾದ ವಿತರಣೆ, ಬಲಿ ನಡೆಯಲಿದೆ.
ಫೆ. 11ರಿಂದ 14ರ ತನಕ ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಫೆ. 13ರಂದು ಸಂಜೆ 5.00ರಿಂದ ಯಕ್ಷಗಾನ ಬಯಲಾಟ ದಕ್ಷಯಾಗ, ಷಣ್ಮುಖ ವಿಜಯ ನಡೆಯಲಿದೆ. ಮಾ. 1ರಂದು ಮಹಾಶಿವರಾತ್ರಿ ಪ್ರಯುಕ್ತ ಶತರುದ್ರಾಭಿಷೇಕ, ರಂಗಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಲಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading