Ad Widget

ಕಾಂಚೋಡು ಜಾತ್ರೋತ್ಸವ- ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಮಹಿಳೆಯರಿಂದ ವಿಶೇಷ ಕುಂಕುಮಾರ್ಚನೆ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11 ಶುಕ್ರವಾರದಂದು ಆರಂಭಗೊಂಡಿದ್ದು ಫೆ.14 ಸೋಮವಾರದ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದ್ದು, ಇಂದು ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಬೆಳಗ್ಗೆ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ ನಡೆಯಿತು. ಕಲ್ಲೇರಿತ್ತಾಯ ಮಹಿಳಾ ಭಜನಾ ತಂಡದಿಂದ ಭಜನಾ ಸೇವೆ ನಡೆಯಿತು.

. . . . . . . . .

ನಂತರ ಮಹಿಳೆಯರಿಂದ ವಿಶೇಷವಾಗಿ ಕುಂಕುಮಾರ್ಚನೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಊರ-ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . .

ಇಂದು ಸಂಜೆ 6.00ರಿಂದ 6.30 ತಾಯಂಬಕಂ, ರಾತ್ರಿ 7.30ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ, ರಾತ್ರಿ 8.30ರಿಂದ ಶ್ರೀ ಮಂಜುನಾಥೇಶ್ವರ ಸ್ವಾಮಿ ಹಾಗೂ ಅಮ್ಮನವರ ಬಲಿ ಉತ್ಸವ ನಡೆದು ಶ್ರೀ ದೇವರ ಗಂಧಪ್ರಸಾದ ವಿತರಣೆಯಾಗಲಿದೆ. ಫೆ.13 ರವಿವಾರದಂದು ಬೆಳಗ್ಗೆ 7.30ರಿಂದ ಗಣಪತಿ ಹವನ, ಬೆಳಗಿನ ಪೂಜೆ, ಬೆಳಗ್ಗೆ 10.00ರಿಂದ ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಶ್ರೀ ದೇವರ ಗಂಧಪ್ರಸಾದ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4.00ಕ್ಕೆ ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ, ಕನ್ಯಾಕುಮಾರಿ ದೈವಗಳ ಭಂಡಾರ ತೆಗೆಯುವುದು, ಸಂಜೆ 6.00ರಿಂದ ರಾತ್ರಿ ಪೂಜೆ, ಪ್ರಸಾದ ಭೋಜನದ ನಂತರ ರಾತ್ರಿ 9.00ರಿಂದ ಅಣ್ಣಪ್ಪ ಮಾಡದಲ್ಲಿ ಧರ್ಮದೈವಗಳ ನೇಮ, ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಫೆ.14 ಸೋಮವಾರದಂದು ಬೆಳಗ್ಗೆ 6.00ರಿಂದ ಬೆಳಗ್ಗಿನ ಪೂಜೆ, ಬೆಳಗ್ಗೆ 10.00ರಿಂದ ಶ್ರೀ ದೇವಳದಲ್ಲಿ ರುದ್ರಾಭಿಷೇಕ, ಮಧ್ಯಾಹ್ನ 12.00ರಿಂದ ಮಹಾಪೂಜೆ, ಅನ್ನಸಂತರ್ಪಣೆ, ಅನಂತರ ಕಲ್ಲೇರಿತ್ತಾಯ ದೈವದ ಭಂಡಾರ ತೆಗೆದು ಕಾಯಾರ ಮಾಡದಲ್ಲಿ ನೇಮೋತ್ಸವ, ಸಂಜೆ 6.00ರಿಂದ ಅಣ್ಣಪ್ಪ ಸ್ವಾಮಿ, ಪಂಜುರ್ಲಿ, ಗುಳಿಗ ದೈವಗಳ ಭಂಡಾರ ತೆಗೆಯುವುದು, ರಾತ್ರಿ 8.30ರಿಂದ ರಂಗಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನದ ನಂತರ ರಾತ್ರಿ 10.00ರಿಂದ ಅಣ್ಣಪ್ಪ ಸ್ವಾಮಿ ಮಾಡದಲ್ಲಿ ಅಣ್ಣಪ್ಪ ಸ್ವಾಮಿ, ಪಂಜುರ್ಲಿ ದೈವಗಳ ನೇಮ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿರುವುದು. ಬೆಳಗಿನ ಜಾವ ದೇವಾಲಯದ ವಠಾರದಲ್ಲಿ ಶ್ರೀ ಗುಳಿಗ ದೈವದ ನೇಮ, ಕಾಣಿಕೆ, ಪ್ರಸಾದ ವಿತರಣೆ, ಬಲಿ ನಡೆಯಲಿದೆ.
ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಫೆ.13 ರವಿವಾರದಂದು ಸಂಜೆ ಗಂಟೆ 4.00ರಿಂದ 5.00ರ ತನಕ ಯುವಕ ಮಂಡಲ(ರಿ.) ಕಳಂಜ, ಕೋಟೆಮುಂಡುಗಾರು ಪ್ರವರ್ತಿತ ಶ್ರೀ ಮಂಜುನಾಥ ಭಜನಾ ಮಂಡಳಿ ವತಿಯಿಂದ ಭಜನೆ ಹಾಗೂ ಮಕ್ಕಳ ಕುಣಿತ ಭಜನೆ, ಸಂಜೆ ಗಂಟೆ 5.00ರಿಂದ ಯುವಕ ಮಂಡಲ(ರಿ.) ಕಳಂಜ, ಕೋಟೆಮುಂಡುಗಾರು ಹಾಗೂ ಅತಿಥಿ ಕಲಾವಿದರಿಂದ ಯಕ್ಷಗಾನ ಬಯಲಾಟ- ದಕ್ಷಯಾಗ, ಷಣ್ಮುಖ ವಿಜಯ ಯಕ್ಷಗಾನ ಬಯಲಾಟ ನಡೆಯಲಿರುವುದು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading