ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭದ ಕುರಿತು ಫೆ.12 ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಫೆ.20 ರಂದು ಸುಳ್ಯದ ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ವಹಿಸಲಿದ್ದಾರೆ, ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ. ನೆರವೇರಿಸಲಿದ್ದಾರೆ . ದಿಕ್ಸೂಚಿ ಭಾಷಣವನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಪ್ರಾಂಶುಪಾಲರಾದ ಶ್ರೀ ಸೂರ್ಯನಾರಾಯಣ ಬಿ.ವಿ ನಡೆಸಲಿದ್ದಾರೆ. ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಗೌಡ ಉಪಸ್ಥಿತರಿರುತ್ತಾರೆ. ಅಲ್ಲದೇ ಆ ದಿನದಂದು ಜ್ಞಾನ ಪೀಠ ಪ್ರಶಸ್ತಿ ಪಡೆದ ಸಾಹಿತಿಗಳ ಭಾವಚಿತ್ರ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಸ್ಥಳ, ಅಧ್ಯಕ್ಷರ ಹೆಸರಿನ ಫಲಕವನ್ನು ಅನಾವರಣಗೊಳಿಸಲಾಗುವುದು ಅಲ್ಲದೇ ಕಾರ್ಯಕ್ರಮದ ಆರಂಭದಲ್ಲಿ ಪೂರ್ಣಿಮಾ ಮಡಪ್ಪಾಡಿ ಇವರಿಂದ ಗೀತಾಗಾಯನ ನಡೆಯಲಿದೆ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಲತಾಶ್ರೀ ಸುಪ್ರೀತ್ ಮೋಂಟಡ್ಕ, ಪ್ರೊ. ಬಾಲಚಂದ್ರ ಗೌಡ, ದಯಾನಂದ ಆಳ್ವ ಪ್ರೊ.ಸಂಜೀವ ಕುದ್ಪಾಜೆ. ತೇಜಸ್ವಿ ಕಡಪಳ ಉಪಸ್ಥಿತರಿದ್ದರು.
- Tuesday
- December 3rd, 2024