
ಮಂಡೆಕೋಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೇರಾಲು ಕುಂಟಿಕಾನ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿತು. ಇದಕ್ಕೆ ಸಚಿವ ಅಂಗಾರರು 20 ಲಕ್ಷ ಅನುದಾನ ಒದಗಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಬಿಜೆಪಿ ಮಂಡಲ ಸಮಿತಿ ಪ್ರ.ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಅಜ್ಜಾವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಯರಾಜ್ ಕುಕ್ಕೇಟಿ, ಗ್ರಾ.ಪಂ.ಅಧ್ಯಕ್ಷೆ ವಿನುತಾ ಪಾತಿಕಲ್ಲು, ಉಪಾಧ್ಯಕ್ಷ ಅನಿಲ್ ತೋಟಪ್ಪಾಡಿ, ಮಂಡೆಕೋಲು ಸೊಸೈಟಿ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲು, ಬಜಪ್ಪಿಲ ಉಳ್ಳಾಕುಲು ದೈವಸ್ಥಾನದ ಮೊಕ್ತೇಸರ ಹೇಮಂತ ಗೌಡ್ರಮನೆ ಹಾಗೂ ರಸ್ತೆಯ ಫಲಾನುಭವಿಗಳು, ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.