Ad Widget

ಹಿಜಾಬ್ ವಿವಾದದ ಹಿಂದೆ ದೇಶ ವಿಭಜನೆಯ ಸಂಚಿರುವ ಆರೋಪ : ಎನ್.ಐ.ಎ. ತನಿಖೆಗೆ ವಿ.ಹೆಚ್.ಪಿ ಒತ್ತಾಯ

ಹಿಜಾಬ್ ಪ್ರಕರಣವನ್ನು ಎನ್ ಐ ಎ ನಿಂದ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷತ್ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದೆ. ಹಿಜಾಟ್ ಎಂಬುದು ಪ್ರಕರಣ ಮಾತ್ರವಲ್ಲ ಇದೊಂದು ಜಿಹಾದಿನ ಷಡ್ಯಂತ್ರ ಮುಸಲ್ಮಾನ ವಿದ್ಯಾರ್ಥಿಗಳ ಮೂಲಕ ಶಾಲಾ ಕಾಲೇಜುಗಳನ್ನು ಉಪಯೋಗಿಸಿ ಪ್ರತ್ಯೇಕತಾ ವಾದವನ್ನು ಬಿಂಬಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಪ್ರಕರಣದ ಹಿಂದೆ PFI SDPI ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಕೈವಾಡವಿದ್ದು, ಅಲ್ಲದೆ ಇದರ ಹಿಂದೆ ಪಾಕಿಸ್ತಾನ ತಾಲಿಬಾನಿನಂತಹ ಇಸ್ಲಾಂ ಮೂಲಭೂತವಾದಿಗಳು ಬೆಂಬಲಕೊಡುತ್ತಿರುವುದು ಆತಂಕಕಾರಿಯಾಗಿದೆ. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಯನ್ನು ಕುಗ್ಗಿಸುವಂತಹ ಕೆಲಸವಾಗುತ್ತಿದೆ. ನ್ಯಾಯಾಲಯದ ತೀರ್ಪನ್ನು ಪಾಲಿಸದೆ, ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿರುವುದು ಇವರ ಜಿಹಾದಿ, ಮಾನಸಿಕತೆಯನ್ನು ಎತ್ತಿ ತೋರಿಸುತ್ತಿದೆ. ಈ ಹಿನ್ನಲೆಯಲ್ಲಿ ಈ ಪ್ರಕರಣದ ಹಿಂದೆ ದೇಶ ವಿಭಜನೆಯ ಸಂಚು ಇರುವ ಸಂಶಯ ವ್ಯಕ್ತವಾಗುತ್ತಿದ್ದು ಉಡುಪಿಯ ಕಾಲೇಜಿನಲ್ಲಿ ಹಿಜಾಬ್, ಪ್ರಕರಣವನ್ನು ಪ್ರಾರಂಭಿಸಿದ 6 ವಿದ್ಯಾರ್ಥಿನಿಯರನ್ನು ಮತ್ತು ಅವರಿಗೆ ಬೆಂಬಲವಾಗಿ ನಿಂತು ಈ ಸಂಚನ್ನು ರೂಪಿಸಿದವರ ವಿರುದ್ಧ ಎನ್ ಐ ಎ (ರಾಷ್ಟ್ರೀಯ ತನಿಖಾದಳ) ಮುಖಾಂತರ ನಡೆಸಲು ಕ್ರಮ ಕೈಗೊಳ್ಳಬೇಕೆಂದು ತಹಶಿಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ನೀಡಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!