ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪದಲ್ಲಿ ನ್ಯಾಯಾಲಯದಿಂದ ಬಂಧನ ವಾರೆಂಟ್ ಗೊಳಗಾಗಿ ತಲೆಮರೆಸಿಕೊಂಡಿದ್ದ ಸುಬ್ರಹ್ಮಣ್ಯದ ಎಸ್ ಎಸ್ ಪಿ ಯು ಕಾಲೇಜಿನ ಪ್ರೌಢಶಾಲಾ ಶಿಕ್ಷಕ ಗುರುರಾಜ್ ಇಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ವಿದ್ಯಾರ್ಥಿನಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪಕ್ಕೊಳಗಾಗಿ ಬಂಧನಕ್ಕೊಳಗಾಗಿದ್ದು, ಒಂದೇ ದಿನದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು. ಅದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯ ಮನೆಯವರು ಹೈಕೋರ್ಟ್ ಮೊರೆ ಹೋಗಿ ಆರೋಪಿಯ ಜಾಮೀನು ರದ್ದುಗೊಂಡಿತ್ತು. ಬಳಿಕ ಬಂಧನ ವಾರೆಂಟ್ ಹೊರಡಿಸಲಾಗಿತ್ತು. ಬಳಿಕ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಗುರುರಾಜ್ ಇಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗಿದ್ದು ಆರೋಪಿಗೆ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.