ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಉಡುಪಿ, ಮಂಗಳೂರು ಮತ್ತು ಸುಳ್ಯ, ಡಾ| ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.), ಸೆಂಚುರಿ ಗ್ರೂಪ್ಸ್ ಬೆಂಗಳೂರು, ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ (ರಿ.) ಸುಬ್ರಹ್ಮಣ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎಸ್.ಡಿ.ಎಂ.ಸಿ ಹರಿಹರ ಪಲ್ಲತ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹರಿಹರ ಪಲ್ಲತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಮಾ.06 ರಂದು ಬೆಳಿಗ್ಗೆ 9:30 ರಿಂದ ಮದ್ಯಾಹ್ನ 01:00 ಗಂಟೆಯವರೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು.
ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅಶೋಕ್ ಕುಮಾರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಪ್ರೋ| ರಂಗಯ್ಯ ಶೆಟ್ಟಿಗಾರ್ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಜತೆ ಕಾರ್ಯದರ್ಶಿ ಲ| ವಿಮಲಾ ರಂಗಯ್ಯ, ಪ್ರಸಾದ್ ನೇತ್ರಾಲಯದ ಡಾ| ಅವಿನಾಶ್, ಲಯನ್ಸ್ ಕ್ಲಬ್ ನ ಚೀಫ್ ಎಕ್ಸ್ ಟೆಂಕ್ಷನ್ ಆಫೀಸರ್ ಲ| ಜಯರಾಮ್ ದೇರಪಜ್ಜನಮನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತರಾಮ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯಾಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಎಲ್ಲಪಡ್ಕ, ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್ ಹಾಗೂ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ ಪಲ್ಲತ್ತಡ್ಕ ಒಕ್ಕೂಟದ ಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್ ಕೋಶಾಧಿಕಾರಿಗಳಾದ ರಾಮಚಂದ್ರ ಪಳಂಗಾಯ ಸ್ವಾಗತಿಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನೇಮಿಚಂದ್ರ ದೋಣಿಪಳ್ಳ ಧನ್ಯವಾದ ಸಮರ್ಪಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಶಿಕ್ಷಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.
ನೂರಾರು ಜನರು ಈ ಶಿಬಿರದ ಪ್ರಯೋಜನ ಪಡೆದುಕೊಂಡರು.
ವರದಿ :- ಉಲ್ಲಾಸ್ ಕಜ್ಜೋಡಿ