ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕೊಡಗು ಜಿಲ್ಲಾ ಘಟಕದ ವತಿಯಿಂದ ನಡೆಯುವ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ ಇಂದು ಸುಳ್ಯ ತಾಲೂಕಿನ ಮಾವಿನಕಟ್ಟೆ ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸರಕಾರಿ ಶಾಲೆ ಉಳಿಯಲಿ ಬೆಳೆಯಲಿ ಎಂಬ ಉದ್ದೇಶದಡಿಯಲ್ಲಿ ನೀಡಲ್ಪಡುವ ಸರಕಾರಿ ಶಾಲೆಗಳ ಆಟೋಟ ಸಾಮಾಗ್ರಿಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಆಟೋಪಕರಣಗಳನ್ನು ದಾನಿಗಳಾದ ಡಾ. ಸುನಿತಾ, ಹಾಗೂ ಡಾ. ಅರ್ಜುನ ಕಲ್ಯಾಣಪುರ ರವರು ಅನುದಾನದಲ್ಲಿ ಒದಗಿಸಲಾಗಿದೆ. ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಅಧ್ಯಕ್ಷ ಇಕ್ಬಾಲ್ ಎಲಿಮಲೆ ಆಟೋಪಕರಣಗಳ ಉದ್ಘಾಟನೆಯನ್ನು ನೆರವೇರಿಸಿದರು.
ಕರವೇ ಸ್ವಾಭಿಮಾನಿ ಬಣ ಕೊಡಗು ಇದರ ಮುಖಂಡ ಉನೈಸ್ ಪೆರಾಜೆ ಯವರು ಅಭಿಯಾನದ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ್ ಸದಸ್ಯ ಶೈಲೇಶ್ ಅಂಬೆಕಲ್ಲು,, ಗ್ರಾಮ ಪಂಚಾಯಿತಿ ಸದಸ್ಯ ದುರ್ಗಾದಾಸ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ರೀಮತಿ ಸಂಧ್ಯಾ ,ಕರವೇ ದ. ಕ ಜಿಲ್ಲಾ ಕಾರ್ಯಾಧ್ಯಕ್ಷ ಜಲೀಲ್ ಬೈತಡ್ಕ , ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಕೇಶವ ಮೆದು ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪೂರ್ಣಿಮಾ, ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು, ಕಾರ್ಯಕ್ರಮದ ಕೊನೆಯಲ್ಲಿ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಅನುದಾನವನ್ನು ತರುವಲ್ಲಿ ಸಹಕರಿಸಿದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಮುಖಂಡರುಗಳಾದ ಉನೈಸ್ ಪೆರಾಜೆ, ಇಕ್ಬಾಲ್ ಎಲಿಮಲೆ, ಜಲೀಲ್ ಬೈತಡ್ಕ ರವರನ್ನು ಸನ್ಮಾನಿಸಲಾಯಿತು.
- Monday
- November 25th, 2024