
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ ಇದರ ಎಲಿಮಲೆ ಉಪಕೇಂದ್ರ ವತಿಯಿಂದ ಮಾ. 17 ರಂದು ಸೇವಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿ ಅಸಂಕ್ರಾಮಿಕ ರೋಗಗಳ ಆರಂಭಿಕ ಪತ್ತೆ ಬಗ್ಗೆ ಮಾಹಿತಿ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣೆ ನಡೆಯಿತು. ಸಮುದಾಯ ಆರೋಗ್ಯ ಅಧಿಕಾರಿ ಕು.ಮೋನಿಷಾ ಇವರು ಮಾಹಿತಿ ನೀಡಿ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಶಾಲಾ ಮಕ್ಕಳು, ಅಂಗನವಾಡಿ ಕಾರ್ಯಕರ್ತೆ, ಪೋಷಕರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.