ಹಿರಿಯ ಸಹಕಾರಿ ಧುರೀಣ ಹಾಗೂ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಕೆ. ಸೀತಾರಾಮ ರೈ ಸವಣೂರು ಇವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾ.20 ರಂದು ಬೆಂಗಳೂರಿನ ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡುವರು. ಕೆ.ಸೀತಾರಾಮ ರೈಯವರು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಸೊಸೈಟಿ ಸೂಪರ್ ವೈಸರ್ ಆಗಿ ಹಲವು ವರ್ಷ ಕಾರ್ಯನಿರ್ವಹಿಸಿ ಬಳಿಕ ಅದಕ್ಕೆ ರಾಜೀನಾಮೆ ನೀಡಿ ಉದ್ಯಮ ಕ್ಷೇತ್ರದಲ್ಲಿ ಮುಂದುವರಿದಿದ್ದರು. ಆ ಬಳಿಕ ಸವಣೂರಿನಲ್ಲಿ ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿ ಸವಣೂರನ್ನು ವಿದ್ಯಾ ಕ್ಷೇತ್ರವನ್ನಾಗಿ ಪರಿವರ್ತಿಸಿದ್ದರು. ತನ್ನ ಅಧ್ಯಕ್ಷತೆಯ ಆದರ್ಶ ವಿವಿದೋದ್ಧೇಶ ಸಹಕಾರಿ ಸಂಸ್ಥೆಯನ್ನು ಸ್ಥಾಪಿಸಿ ಅದರ ಹತ್ತಾರು ಶಾಖೆಗಳನ್ನು ವಿಸ್ತರಿಸಿದ್ದಾರೆ. ಕೆ.ಎಂ.ಎಫ್. ನಿರ್ದೇಶಕರಾಗಿ ಹಲವು ವರ್ಷ ಕಾರ್ಯನಿರ್ವಹಿಸಿದ್ದರು. ಜತೆಗೆ ಸಮಾಜ ಸೇವೆ ಮಾಡುವ ಉದ್ದೇಶದಿಂದ ರೋಟರಿ ಕ್ಲಬ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿ ದುಡಿಯುತ್ತಿದ್ದಾರೆ.
- Tuesday
- December 3rd, 2024