2025 ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ಕೇಂದ್ರ ಸರಕಾರದ ಘೋಷಣೆಯಂತೆ ಸುಳ್ಯ ತಾಲ್ಲೂಕನ್ನು 2025ಕ್ಕೆ ಕ್ಷಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಪ್ರತಿಜ್ಞೆಯನ್ನು ಸುಳ್ಯ ತಾಲ್ಲೂಕು ಆರೋಗ್ಯಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ನಂದಕುಮಾರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಧಿಕಾರಿ ಡಾ.ನಂದಕುಮಾರ್, ಸುಬ್ರಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿ, ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುನಾಥ್, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ್, ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪವನ್ ಕುಮಾರ್, ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ವೈದ್ಯಾಧಿಕಾರಿ ಡಾ.ಅಶೋಕ್ ಕುಮಾರ್, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೈತ್ರ ಬಾನು ಹಾಗೂ ಆರ್. ಬಿ. ಎಸ್. ಕೆ ವೈದ್ಯರುಗಳು, ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
- Friday
- November 1st, 2024