ಅಂಬೇಡ್ಕರ್ ರಕ್ಷಣಾ ವೇದಿಕೆ ಚಾರಿಟೇಬಲ್ ಟ್ರಸ್ಟ್ ರಿ. ಸುಳ್ಯ ಇದರ ವತಿಯಿಂದ ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಮಂಗಳೂರು ದೇರಳಕಟ್ಟೆ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ, ಅಕ್ಷಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆಸಲಾಗುತ್ತದೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುಂದರ ಪಾಟಾಜೆ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದಾನಿಗಳು 6361 215 643 ಮೊಬೈಲ್ ನಂಬರಿಗೆ ಸಂಪರ್ಕಿಸಬಹುದು.
- Thursday
- November 21st, 2024