ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ರವರು ಎ.10 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.
ಶೀಘ್ರ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಕೆ.ಜಿ.ಎಫ್-2 ಚಿತ್ರತಂಡದ ಜೊತೆಯಲ್ಲಿ ಯಶ್ ಕ್ಷೇತ್ರಕ್ಕೆ ಬೇಟಿ ನೀಡಿದರು.
ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಚಿತ್ರತಂಡಕ್ಕೆ ಸ್ವಾಗತಿಸಿದರು. ನಂತರ ಯಶ್ ಹಾಗೂ ಸಂಗಡಿಗರು ಕ್ಷೇತ್ರದಲ್ಲಿ ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಸದಸ್ಯರಾದ ಶೋಭಾ ಗಿರಿಧರ್, ಎ.ಇ.ಓ ಪುಷ್ಪಲತಾ, ಶಿಷ್ಠಾಚಾರ ಅಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ