ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಜನರ ಕುಂದು-ಕೊರತೆಗಳನ್ನು ಈಡೇರಿಸುವ ಸಲುವಾಗಿ ಜನಸ್ಪಂದನ ಕಾರ್ಯಕ್ರಮ ಮೇ.06ರಂದು ಜರುಗಿತು. ಈ ಸಂದರ್ಭದಲ್ಲಿ ಜನರು ತಾಲೂಕು ಕಚೇರಿಯಲ್ಲಿ ಎದುರಿಸುವ ಸಮಸ್ಯೆಗಳನ್ನು ತಿಳಿದು ಅಧಿಕಾರಿಗಳ ಗಮನಕ್ಕೆ ತರಲಾಯಿತು. ಈ ಕಾರ್ಯಕ್ರಮದ ನೇತೃತ್ವವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ದ.ಕ. ಜಿಲ್ಲಾಧ್ಯಕ್ಷರಾದ ಅಲೆಕ್ಸಾಂಡರ್ ಡಿಸೋಜ, ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿಯವರು ವಹಿಸಿದ್ದರು.
ನಂತರ ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಕುಂದು ಕೊರತೆಗಳ ಬಗ್ಗೆ ವೈದ್ಯರಲ್ಲಿ ಚರ್ಚಿಸಿ, ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಮನವಿ ಮಾಡಲಾಯಿತು.