2022-23 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಅಡಿಕೆ ಹಳದಿ ಎಲೆ ರೋಗದ ನಿಯಂತ್ರಣಕ್ಕೆ ಸಂಶೋಧನೆ ಹಾಗೂ ಪರ್ಯಾಯ ಬೆಳೆಗಳಿಗೆ ಪ್ರೋತ್ಸಾಹಧನ ಕಾರ್ಯಕ್ರಮದ ಅಡಿಯಲ್ಲಿ ಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಮಾಹಿತಿ ಕಾರ್ಯಗಾರ ನಡೆಯಲಿದ್ದು, ಈ ಮಾಹಿತಿ ಕಾರ್ಯಾಗಾರದಲ್ಲಿ ಇತರ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಲಾಗುವುದು. ಅಡಿಕೆ ಬೆಳೆಗಾರರು ಇತರೆ ಬೆಳೆಗಳಾದ ಬಾಳೆ, ತೆಂಗು, ಕೊಕ್ಕೋ, ಕಾಳುಮೆಣಸು, ಜಾಯಿಕಾಯಿ, ರಾಂಬೂಟನ್, ತಾಳೆ ಹಾಗೂ ಇತರೆ ಬೆಳೆಗಳನ್ನು ಬೆಳೆಯಬಹುದು. ಪರ್ಯಾಯ ಬೆಳೆಗಳನ್ನು ಬೆಳೆಯಲು ಆಸಕ್ತಿ ಹೊಂದಿರುವ ಫಲಾನುಭವಿಗಳಿಗೆ MGNREGA ಯಡಿ ನಿಗದಿಯಾಗಿರುವ ಘಟಕ ವೆಚ್ಚದ ಶೇ.50 ರಷ್ಟು ಸಹಾಯಧನ ನೀಡಲಾಗುವುದು. ಪ್ರತೀ ಫಲಾನುಭವಿಗೆ ಕನಿಷ್ಟ 0.2 ಹೆ. ನಿಂದ ಗರಿಷ್ಟ 4 ಹೆ. ವರೆಗೆ ಮಿತಿಗೊಳಿಸಿ ಸಹಾಯಧನ ನೀಡಲಾಗುವುದು ಈ ನಿಟ್ಟಿನಲ್ಲಿ ಯೋಜನೆಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಗ್ರಾಮ ಪಂಚಾಯತ್ ಮೂಲಕ ಕೆಳಕಂಡ ದಿನಾಂಕಗಳಂದು ಹಮ್ಮಿಕೊಳ್ಳಲಾಗಿದೆ.
ಮೇ.16 ರಂದು ಕೊಡಿಯಾಲ ಹಾಗೂ ಆಲೆಟ್ಟಿ, 18 ರಂದು ನೆಲ್ಲೂರು ಕೆಮ್ರಾಜೆ ಹಾಗೂ ಉಬರಡ್ಕ ಮಿತ್ತೂರು, ಮೇ19 ರಂದು ಸಂಪಾಜೆ ಹಾಗೂ ಅರಂತೋಡು, ಮೇ.20ರಂದು ಕೊಲ್ಲಮೊಗ್ರು, ಮೇ. 23ರಂದು ಮರ್ಕಂಜ ಹಾಗೂ ಮಡಪ್ಪಾಡಿ ಗ್ರಾಮ ಪಂಚಾಯತ್ ಗಳಲ್ಲಿ ಮಾಹಿತಿ ಕಾರ್ಯಾಗಾರ ನಡೆಯಲಿದ್ದು, ಅಡಿಕೆ ಹಳದಿ ಎಲೆ ರೋಗ ಬಾಧಿತ ಪ್ರತಿಯೊಬ್ಬ ರೈತರೂ ಈ ಮಾಹಿತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಜನೆಯ ಅನುಷ್ಟಾನಕ್ಕಾಗಿ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ :- ಉಲ್ಲಾಸ್ ಕಜ್ಜೋಡಿ