Ad Widget

ಗೃಹರಕ್ಷಕದಳದ ಸಿಬ್ಬಂದಿಗಳ ಸೇವೆಯನ್ನು ಮುಂದುವರಿಸುವಂತೆ ರಾಜ್ಯ ಸರಕಾರಕ್ಕೆ ಕಾಂಗ್ರೆಸ್ ಆಗ್ರಹ

ರಾಜ್ಯ ಸರ್ಕಾರವು ಆರ್ಥಿಕ ಕಾರಣವೊಡ್ಡಿ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಕರ್ತವ್ಯ ಮಾಡಿಕೊಂಡು ಬರುತ್ತಿರುವ ಗೃಹರಕ್ಷಕದಳದ ಸಿಬ್ಬಂದಿಗಳನ್ನು ಕೆಲಸದಿಂದ ಬಿಡುವ ಆದೇಶ ಜಾರಿ ಮಾಡಿದ್ದು ಈ ದಿಢೀರ್ ಘೋಷಣೆ ಅನೇಕ ದುಷ್ಪರಿಣಾಮಗಳಿಗೆ ಕಾರಣವಾಗಲಿದೆ. ರಾಜ್ಯದಲ್ಲಿ ಸುಮಾರು 25 ಸಾವಿರ ಗೃಹರಕ್ಷಕ ಸಿಬ್ಬಂದಿ ಗಳು ಸೇವೆ ಸಲ್ಲಿಸುತ್ತಿದ್ದು ನೆರೆ ,ಪರಿಹಾರ, ಸಾರಿಗೆ ಸುವ್ಯವಸ್ಥೆ, ಬಂದೋಬಸ್ತು, ಗಣ್ಯರ ರಕ್ಷಣೆ, ಕಾನೂನು ಸುವ್ಯವಸ್ಥೆ, ಮುಂತಾದ ಸೇವೆಯನ್ನು ನಿಷ್ಠಾವಂತ ರೀತಿಯಲ್ಲಿ ಸಲ್ಲಿಸುತ್ತಿದ್ದಾರೆ. ರಾಜ್ಯದ ಅನೇಕ ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿಗಳ ಕೊರತೆ ಇದ್ದು ಗೃಹರಕ್ಷಕ ದಳದವರ ಸಹಕಾರದಿಂದ ನಿರ್ವಹಿಸಲ್ಪಡುತ್ತಿದೆ. ಪೊಲೀಸ್ ಇಲಾಖೆಯ ಅಧೀನದಲ್ಲಿ ಸುಮಾರು ಹನ್ನೆರಡು ಸಾವಿರ ಮಂದಿಯನ್ನು ಕೈ ಬಿಡಲಾಗುತ್ತಿದ್ದು ಆಡಳಿತ ವ್ಯವಸ್ಥೆ ಹಾಗೂ ಆದ್ಯತೆಗಳನ್ನು ಕಡೆಗಣಿಸುತ್ತಿರುವ ರಾಜ್ಯಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಸುಮಾರು ಹದಿನೈದು ವರ್ಷಗಳಿಂದಲೂ ಹೆಚ್ಚು ಕಾಲದಿಂದ ಸೇವೆಸಲ್ಲಿಸಿದ ಬಡ ಸಿಬ್ಬಂದಿಗಳನ್ನು ಕೈ ಬಿಡುತ್ತಿರುವುದು ತುಂಬಾ ನೋವಿನ ವಿಚಾರ . ಇದರಿಂದಾಗಿ ಅವರ ಜೀವನೋಪಾಯಕ್ಕೆ ಕಷ್ಟವಾಗಲಿದೆ .ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 250 ರ ಪೈಕಿ ಕೇವಲ 80 ಮಂದಿಯನ್ನು ಉಳಿಸಿಕೊಳ್ಳಲಾಗುತ್ತದೆ ಎಂಬ ವಿಚಾರ ಮಾದ್ಯಮಗಳಲ್ಲಿ ಬಂದಿರುತ್ತದೆ . ಇದೀಗ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದವರನ್ನು ಕೈ ಬಿಡುವ ಮೂಲಕ ಕರೋನ ಸಾಂಕ್ರಾಮಿಕ ರೋಗದ ಹೆಸರಿ ನಲ್ಲಿ ರಾಜ್ಯ ಸರಕಾರ ಯುವಜನಾಂಗವನ್ನು ನಿರುದ್ಯೋಗಿಗಳನ್ನಾಗಿ ಮಾಡುವುದು ದುರ್ದೈವದ ಸಂಗತಿ . ಹಾಗಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯು ಕೂಡಲೆ ರಾಜ್ಯ ಸರಕಾರ ಗ್ರಹ ರಕ್ಷಕ ಸಿಬ್ಬಂದಿಗಳನ್ನು ಮತ್ತು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರನ್ನು ಸೇವೆಯಲ್ಲಿ ಮುಂದುವರಿಸುವಂತೆ ಅಗ್ರಹಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ ಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!