ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಪ್ರಾರಂಭ ದಿನವಾದ ಇಂದು ಅದ್ದೂರಿಯಾಗಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ದಿನೇಶ್ ಹೆಚ್ ಎಲ್, ವೆಂಕಟೇಶ್, ಶಿಕ್ಷಕ ರಕ್ಷಕ ಸಂಘದ ದಿನೇಶ್ ಹಾಗೂ ಪೋಷಕರು, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಯಶವಂತ ರೈ, ಕಾಲೇಜು ಪ್ರಾಂಶುಪಾಲರಾದ ಸೋಮಶೇಖರ್ ನಾಯಕ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಶಾಲಾ ಪ್ರಾರಂಭೋತ್ಸವದ ಅಂಗವಾಗಿ 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕವನ್ನು ವಿತರಿಸಲಾಯಿತು.
ವರದಿ :ಅನನ್ಯ ಹೆಚ್ ಸುಬ್ರಹ್ಮಣ್ಯ