ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ದ, ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು ಸಹಕಾರ ಇಲಾಖೆ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಆಮಿಟೆಡ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ ಮೇ.18 ರಂದು ಸುಳ್ಯ ಪಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ. ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷ ಎಸ್. ಐ. ಜಯರಾಮ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶಶಿಧರ ಎಲೆ ಅವರು ಸಹಕಾರ ಸಂಘಗಳ ಸಮಗ್ರ ಅಭಿವೃದ್ಧಿಯ ಹೆಜ್ಜೆಗಳು ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ಕೆ., ಪುತ್ತೂರು ಉಪವಿಭಾಗದ ಉಪನಿಂಬಂಧಕರಾದ ಶ್ರೀಮತಿ ತ್ರಿವೇಣಿ, ಕಸ್ಕಾರ್ಡ್ ಬ್ಯಾಂಕ್ ನಿರ್ದೇಶಕ ರಾಜಶೇಖರ ಜೈನ್, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಜಿ. ನಾಯಕ್, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕಿ ಶ್ರೀಮತಿ ಸಾವಿತ್ರಿ ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕ ನಿತ್ಯಾನಂದ ಭಕ್ತ, ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಸುಂದರ ಗೌಡ ಇಚ್ಚಿಲ, ಮುಖ್ಯ ಕಾರ್ಯನಿರ್ವಹಧಿಕಾರಿ ಪುರುಷೋತ್ತಮಮ ಎಸ್.ಪಿ., ವಿಸ್ತರಣಾಧಿಕಾರಿಗಳಾದ ಕೇಶವ ಸುಳ್ಳಿ, ಹರೀಶ್ ಕುಮಾರ್, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ರಾಜಶೇಖರ ಜೈನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಾವಿತ್ರಿ ರಾಯ್ ವಂದಿಸಿದರು.