ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಮಾಜಕಾರ್ಯ ವಿಭಾಗ, ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಇಲಾಖೆ ಮತ್ತು ಮಂಡಳಿ ಸಹಯೋಗದೊಂದಿಗೆ ಭಾರತ ಸರಕಾರದ ಮಾನ್ಯತೆ ಪಡೆದ ಹೆಚ್.ಎಲ್.ಎಲ್ ಲೈಫ್ ಕೇರ್ ಮಂಗಳೂರು ಇದರ ನುರಿತ ತಜ್ಞರ ಸಹಕಾರದಲ್ಲಿ ಕಟ್ಟಡ ಕಾರ್ಮಿಕರಿಗೆ, ಇತರೇ ಕಾರ್ಮಿಕರಿಗೆ ಹಾಗೂ ಅವರನ್ನು ಅವಲಂಬಿತರಿಗೆ ಅಗತ್ಯವಾದ ಮಹತ್ವದ ಉಚಿತ ಮೂರು ದಿನಗಳ ಆರೋಗ್ಯ ತಪಾಸಣಾ ಶಿಬಿರವನ್ನು ನೆಹರೂ ಮೆಮೋರಿಯಲ್ ಕಾಲೇಜಿನ ಸಭಾಂಗಣದಲ್ಲಿ ಮೇ. 25 ರಿಂದ 27ರವರೆಗೆ ಆಯೋಜಿಸಲಾಗಿತ್ತು.
ಶಿಬಿರವನ್ನು ಮೇ. 25 ಡಾ. ಆಕಾಂಕ್ಷ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ ಎಂ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹೆಚ್.ಎಲ್.ಎಲ್ ಲೈಫ್ ಕೇರ್ ಜಿಲ್ಲಾ ಸಂಯೋಜಕ ಸುಬ್ರಮಣಿ, ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಪ್ರೊ. ಎಂ. ಬಾಲಚಂದ್ರ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಟಿ ವಿಶ್ವನಾಥ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ಶ್ರೀಮತಿ ಮಮತಾ ಕೆ ಸ್ವಾಗತಿಸಿ, ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುರ ಎಂ. ಆರ್ ವಂದಿಸಿದರು. ಅಂತಿಮ ಸಮಾಜಕಾರ್ಯ ವಿಭಾಗದ ರಚನಾ ಪ್ರಾರ್ಥಿಸಿ, ಅರ್ಪಣಾ ಮತ್ತು ಮೌನವಿ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಫಲಾನುಭವಿಗಳಿಗೆ 19 ಬಗೆಯ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಾಗಿತ್ತು. ಸುಮಾರು 500ಕ್ಕಿಂತ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದುಕೊಂಡರು.