ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ “ತಂಬಾಕು ನಮ್ಮ ಪರಿಸರಕ್ಕೆ ಅಪಾಯ” ಎಂಬ ಶೀರ್ಷಿಕೆಯಡಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ರತ್ನಾವತಿ ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತಂಬಾಕಿನಿಂದಾಗುವ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕ ನಾಯಕರಾದ ನಿರಂಜನ್ ಕೆ, ಲಿಮಿತಾ ಪಿ ಜೆ ವೇದಿಕೆಯಲ್ಲಿದ್ದರು. ಕೌಸಲ್ಯ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಕೃತಿಕಾ ಬಿ ಸ್ವಾಗತಿಸಿ, ಜ್ಯೋತಿ ವಂದಿಸಿದರು. ರತ್ನ ಸಿಂಚನ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಕ್ಷಯ ರೋಗ ನಿರ್ಮೂಲನೆಗೆ ಸಂಬಂಧಿಸಿದಂತೆ ಹಿಂದೆ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
- Thursday
- November 21st, 2024