Ad Widget

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಉದ್ಘಾಟನೆ ಮತ್ತು ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ

ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು, ಶಾಲಾ ಅಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಪ್ರಥಮವಾಗಿ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.1 ರಂದು ಎಲ್ ಕೆ ಜಿ ತರಗತಿ ಉದ್ಘಾಟನೆಗೊಂಡಿತು.


ಎಲ್ ಕೆ ಜಿ ತರಗತಿ ಕೊಠಡಿಯನ್ನು ಕ್ಷೇತ್ರ ಸಂಪನ್ಮೂಲ ಸಮನ್ವಯಧಿಕಾರಿ ಶ್ರೀಮತಿ ಯು.ಕೆ.ಶೀತಲ್ ರವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಉಳುವಾರು ವಹಿಸಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅನಂದ ಕಲ್ಲುಗದ್ದೆಯವರು ನೀಡಿದ ನೋಟ್ ಪುಸ್ತಕವನ್ನು ಅವರ ಮಾತೃಶ್ರಿ ಶ್ರೀಮತಿ ಚಿನ್ನಮ್ಮ ವಿತರಿಸಿದರು. ಅರಂತೋಡು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸರಸ್ವತಿಯವರು ಎಲ್ ಕೆ ಜಿ ಮಕ್ಕಳಿಗೆ ಚಯರ್ ಕೊಡುಗೆಯಾಗಿ ನೀಡಿದರು.

ವೇದಿಕೆಯಲ್ಲಿ ಶಿಕ್ಷಣ ಸಂಯೋಜಕರು ಬಿ.ಇ.ಒ ಕಛೇರಿ ಶ್ರೀಮತಿ ನಳಿನಿ, ಸುಳ್ಯ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪುಷ್ಪ ಮೇದಪ್ಪ, ಅರಂತೋಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕು.ಶ್ವೇತಾ ಅರಮನೆಗಾಯ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಶಿವಾನಂದ ಕುಕ್ಕುಂಬಳ, ಗಂಗಾಧರ ಬನ ,ಪುಷ್ಪಾಧರ ,ಮಾಲಿನಿ ಉಳುವಾರು ,ದುರ್ಗಾಮಾತ ಭಜನಾ ಮಂಡಳಿ ಅಧ್ಯಕ್ಷ ಕೆ.ಆರ್ ಪದ್ಮನಾಭ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್ ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್,ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್,ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸರಸ್ವತಿ ಮುಂತಾದವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ವಿದ್ಯಾರ್ಥಿಗಳ ಪೋಷಕರು, ಎಸ್ ಡಿ ಎಮ್ ಸಿ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಇದ್ದರು. ಗೋಪಾಲಕೃಷ್ಣ ಬನ ಸ್ವಾಗತಿಸಿ, ಶಿಕ್ಷಕಿ ಭಾನುಮತಿ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!