ಆಮ್ ಆದ್ಮಿ ಪಕ್ಷಕ್ಕೆ ಅಶೋಕ್ ಎಡಮಲೆ ರಾಜೀನಾಮೆ

ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರ ಸಂಚಾಲಕ ಹಾಗೂ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿರುವ ಅಶೋಕ್ ಎಡಮಲೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಹುದ್ದೆಗಳಿಗೆ ಹಾಗು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆಯನ್ನು ರಾಜ್ಯ ಸಂಚಾಲಕರಿಗೆ ಸಲ್ಲಿಸಿದ್ದಾರೆ ಆದರೆ ರಾಜಿನಾಮೆ ಅಂಗೀಕಾರ ಆಗಿಲ್ಲ ಎಂದು ತಿಳಿದುಬಂದಿದೆ. ರಾಜೀನಾಮೆ ನೀಡಿರುವುದು ಹೌದು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಧ್ಯಮಗಳಿಗೆ ಅವರು ತಿಳಿಸಿದ್ದಾರೆ.

. . . . . . . . .

ಜಿಲ್ಲಾ ಹಾಗೂ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಉಂಟಾದ ಅಸಮಾಧಾನ ಮತ್ತು ಕೆಲ ಭಿನ್ನಾಭಿಪ್ರಾಯದ ಹಿನ್ನಲೆಯಲ್ಲಿ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗುತಿದೆ. ವಿಪ್ರೋ ಕಂಪೆನಿಯ ಉನ್ನತ ಹುದ್ದೆ ಬಿಟ್ಟು 2014 ರಲ್ಲಿ ಆಮ್ ಆದ್ಮಿ ಪಕ್ಷ ಸೇರಿದ್ದ ಎಡಮಲೆ 2016ರಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಸಂಚಾಲಕರಾಗಿದ್ದಾರೆ. ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯ, ರಾಜ್ಯ ವಿದ್ಯಾರ್ಥಿ ಘಟಕ ಹಾಗು ಯುವ ಘಟಕದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಪಕ್ಷದ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲಾ ವೀಕ್ಷಕರಾಗಿ, 3 ಜಿಲ್ಲೆಗಳನ್ನು ಒಳಗೊಂಡ ವಲಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಟಿ.ವಿ.ಮಾಧ್ಯಮಗಳ ರಾಜಕೀಯ ಚರ್ಚೆಯಲ್ಲಿ ಆಪ್ ಪ್ರತಿನಿಧಿಯಾಗಿ ಭಾಗವಹಿಸುತ್ತಿದ್ದರು. ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಪಕ್ಷವನ್ನು ತಳ ಮಟ್ಟದಿಂದ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದ ಬಾರಿ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ರೈತ ಸಂಘ, ರೈತ ಮತ್ತು ಶ್ರಮಿಕರ ಸಂಘ ಸ್ಥಾಪನೆ ಮಾಡಿ ಅದರಲ್ಲಿ ಸಕ್ರೀಯರಾಗಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading