ಅಕಾಡೆಮಿ ಆಫ್ ಲಿಬರಲ್ ಜ್ಯುಕೇಶನ್ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರು, ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಊರುಬೈಲುರವರನ್ನು ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಸಲಹೆಗಾರರನ್ನಾಗಿ ನೇಮಕ ಮಾಡಿರುತ್ತಾರೆ.
ಇವರು ಕೆ.ವಿ.ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜು ಸುಳ್ಯ, ಕೆ.ವಿ.ಜಿ ಪಾಲಿಟೆಕ್ನಿಕ್ ಸುಳ್ಯ, ಕೆ.ವಿ.ಜಿ ಐ.ಪಿ.ಎಸ್ ಸುಳ್ಯ, ಕೆ.ವಿ.ಜಿಐಟಿಐ ಸುಳ್ಯ,ಕೆ.ವಿ.ಜಿ ಪ್ರೌಢಶಾಲೆ ಕೊಲ್ಲಮೊಗ್ರ, ಕೆ.ವಿ.ಜಿ ಐ.ಟಿಐ ಭಾಗಮಂಡಲ, ಕೆ.ವಿ.ಜಿ ಸಮೂಹ ವಿದ್ಯಾರ್ಥಿ ನಿಲಯ ಹಾಗೂ ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ಆಡಳಿತಕ್ಕೊಳಪಟ್ಟ ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವಕಾಲೇಜು ಸುಳ್ಯ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಲಹೆಗಾರರಾಗಿ ಸೇವೆ ಸಲ್ಲಿಸಲಿದ್ದಾರೆ. ಈ ಎಲ್ಲಾ ವಿದ್ಯಾ ಸಂಸ್ಥೆಗಳ ಸರ್ವತೋಮುಖ ಬೆಳವಣಿಗೆ, ಏಳಿಗೆ ಹಾಗೂ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಡಾ. ರೇಣುಕಾ ಪ್ರಸಾದ್ ಕೆ.ವಿಯವರು ನೇಮಿಸಿ ಹೆಚ್ಚುವರಿ ಜವಾಬ್ದಾರಿ ಹಾಗೂ ಅಧಿಕಾರವನ್ನು ನೀಡಿರುತ್ತಾರೆ. ಇವರು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗಕ್ಕೆ ಉಪನ್ಯಾಸಕರಾಗಿ ಸೇರ್ಪಡೆಗೊಂಡು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಬೆಳಗಾವಿ ಇದರಿಂದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದು ಪ್ರಸ್ತುತ ವಿಭಾಗ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಜಯಪ್ರಕಾಶ್ ಊರುಬೈಲು ಮತ್ತು ಶ್ರೀಮತಿ ಲೀಲಾವತಿ ಜಯಪ್ರಕಾಶ್ ದಂಪತಿಗಳ ಪುತ್ರರಾಗಿದ್ದಾರೆ.