ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಉಷಾ ಫೈರ್ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ಇವುಗಳ ಸಹಭಾಗಿತ್ವದಲ್ಲಿ ಜೂ.17 ರಂದು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಸುಳ್ಯ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರು ಮತ್ತು ಸ್ವಯಂ ಸೇವಕರಿಗೆ ಜೀವರಕ್ಷಣಾ ಕೌಶಲ್ಯ ತರಬೇತಿ ನಡೆಯಿತು.
ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾಲಕ್ಷ್ಮಿ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಎನ್.ಎ ರಾಮಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಟ್ ಪಾಯಸ್, ಉಷಾ ಫೈರ್ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ನ ಅಧ್ಯಕ್ಷರಾದ ಜಗದೀಶ್ ಉಡುಪ, ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ವಲಯಾಧ್ಯಕ್ಷರಾದ ಲೋಕನಾಥ, ವಿಪತ್ತು ನಿರ್ವಹಣಾ ಯೋಜನಾಧಿಕಾರಿಗಳಾದ ಜೈವಂತ ಪಟಾಗರ, ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಉಮೇಶ್.ಪಿ.ಕೆ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಕ್ಯಾಪ್ಟನ್ ಪಿ.ಜಿ ಜಯರಾಮ್ ಸೇರಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ವಲಯ ಮೇಲ್ವಿಚಾರಕರು ಹಾಗೂ ಲೆಕ್ಕ ಪರಿಶೋಧಕರು ಹಾಗೂ ಸುಳ್ಯ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ ಸ್ವಾಗತಿಸಿ ಆಂತರಿಕ ಲೆಕ್ಕ ಪರಿಶೋಧಕರಾದ ಉಮೇಶ್ ವಂದಿಸಿದರು. ವಲಯ ಮೇಲ್ವಿಚಾರಕರಾದ ಸುಧೀರ್ ಕಾರ್ಯಕ್ರಮ ನಿರೂಪಿಸಿದರು.
ವರದಿ :- ಉಲ್ಲಾಸ್ ಕಜ್ಜೋಡಿ