ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಕಾಂಗ್ರೆಸ್ ನಿಂದ ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಜಿ.ಕೆ.ಹಮೀದ್ ರನ್ನು ಉಚ್ಚಾಟಿಸಲಾಗಿತ್ತು.
ಈ ಬಗ್ಗೆ ಅಮರ ಸುದ್ದಿಗೆ ಪ್ರತಿಕ್ರಿಯಿಸಿದ್ದು “ನನ್ನನ್ನು ಗ್ರಾಮ ಮಟ್ಟದ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿರುವುದು ಮಾಧ್ಯಮದಿಂದ ತಿಳಿಯಿತು. ಆದರೆ ಇದುವರೆಗೆ ಯಾವುದೇ ನೋಟಿಸ್ ಸಿಕ್ಕಿಲ್ಲ. ಈಗ ತಾಲೂಕು ಕಾಂಗ್ರೆಸ್ ನಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಅವರು ನನ್ನನ್ನು ಉಚ್ಛಾಟಿಸಿ ಪ್ರಕಟಣೆ ಹೊರಡಿಸಿದ್ದಾರೆ. ನಾನು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷನಾಗಿದ್ದೇನೆ. ನನ್ನನ್ನು ಪಿಸಿ ಜಯರಾಮ್ ಅವರಿಗೆ ಪಕ್ಷದಿಂದ ಉಚ್ಛಾಟಿಸಲು ಅಧಿಕಾರ ಇರುವುದಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಬರುವುದಿಲ್ಲ. ಇದು ಪಕ್ಷಾತೀತ ಚುನಾವಣೆ ಆಗಿರುವುದರಿಂದ ಇಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಿಗೆ ನನ್ನನ್ನು ಉಚ್ಛಾಟಿಸುವ ಅಧಿಕಾರ ಇರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.