Ad Widget

ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ

ಕಡಬ ತಾಲೂಕಿನ ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ನೂತನ ಶೈಕ್ಷಣಿಕ ವರ್ಷಕ್ಕೆ ದಾಖಲಾತಿಗೊಂಡ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಗುರುಗಳಾದ ಯಶವಂತ ರೈ , ಪ್ರೌಢ ಶಾಲೆಯ ಮುಖ್ಯಗುರುಗಳಾದ ಗಣಪತಿ ಭಟ್ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯದ ಮುಖ್ಯಗುರುಗಳಾದ ಪ್ರಶಾಂತ್ , ಬಿ., ಮತ್ತು ಶಿಕ್ಷಕ – ರಕ್ಷಕ ಸಮಿತಿಯ ಅಧ್ಯಕ್ಷರಾದ ಸತೀಶ್ ಎರ್ಕ ಉಪಸ್ಥಿತರಿದ್ದರು.

ಸಂಸ್ಥೆಯ ಮುಖ್ಯ ಶಿಕ್ಷಕರಾದ ಪ್ರಶಾಂತ್ ಬಿ ಅವರು ಸ್ವಾಗತಿಸಿ, ಸಹ ಶಿಕ್ಷಕರಾದ ಉಮೇಶ್ ವಂದಿಸಿದರು. ಕಾರ್ಯಕ್ರಮವನ್ನು ಮಹಾಬಲೇಶ್ವರ ಕಾರ್ತಿಕ್ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!