Ad Widget

ಸುಳ್ಯ : ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಸರಕಾರಿ ಸವಲತ್ತು ವಿತರಣೆ ಹಾಗೂ ಪ್ರಗತಿ ಪರಿಶೀಲನಾ ಸಭೆ

ತಾಲೂಕು ಆಡಳಿತದ ವತಿಯಿಂದ ಸರಕಾರಿ ಸವಲತ್ತು ವಿತರಣೆ ಕಾರ್ಯಕ್ರಮ ಹಾಗೂ ಪ್ರಗತಿ ಪರಿಶೀಲನೆ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು . ಸವಲತ್ತು ವಿತರಣೆ ಕಾರ್ಯಕ್ರಮವನ್ನು ಇಂಧನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಉದ್ಘಾಟಿಸಿ ಸರಕಾರಿ ಸವಲತ್ತು ಮತ್ತು ಯೋಜನೆಗಳ ಬಗ್ಗೆ ಮಾತನಾಡಿ ಮಾಹಿತಿ ಕೊರತೆ ಇದ್ದರೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಮತ್ತು ಅಧಿಕಾರಿಗಳಲ್ಲಿ ಮಾಹಿತಿ ಪಡೆದುಕೊಂಡು ಸರಕಾರಿ ಸವಲತ್ತುಗಳನ್ನು ಪಡೆದುಕೊಳ್ಳಲು ವಿನಂತಿಸಿದರು. ಸುಳ್ಯ ಶಾಸಕ ಮೀನುಗಾರಿಕೆ ಬಂದರು ಒಳನಾಡು ಸಾರಿಗೆ ಇಲಾಖೆಯ ಸಚಿವ ಎಸ್ . ಅಂಗಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು.

. . . . .


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್ , ಪುತ್ತೂರು ಸಹಾಯಕ ಕಮಿಷನರ್ ಗಿರೀಶ್ ನಂದನ್ , ಪುತ್ತೂರು ಡಿವೈಎಸ್ಪಿ ಗಾನ ಪಿ. ಕುಮಾರ್ , ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಸುಳ್ಯ ತಹಶೀಲ್ದಾರ್ ಕು.ಅನಿತಾಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಸ್ವಾಗತಿಸಿ, ಗ್ರಾಮ ಲೆಕ್ಕಾಧಿಕಾರಿ ತಿಪ್ಪೇಶಪ್ಪ , ಉಪ ತಹಶೀಲ್ದಾರ್ ಚಂದ್ರಕಾಂತ್ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!