Ad Widget

ಎನ್.ಎಂ.ಸಿ.ಯಲ್ಲಿ ಮಂಗಳೂರು ವಿ.ವಿ.ಮಟ್ಟದ ಹಗ್ಗಜಗ್ಗಾಟ ಪಂದ್ಯಾಟ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ
ಹಗ್ಗ ಜಗ್ಗಾಟ ಸ್ಪರ್ಧೆಯು ಜೂ. 23 ರಂದು ನಡೆಯಿತು. CEN ಪೋಲೀಸ್ ಸ್ಟೇಷನ್ ಮಂಗಳೂರು ಇಲ್ಲಿಯ ಪೋಲೀಸ್ ಇನ್ಸ್ ಪೆಕ್ಟರ್ ಸತೀಶ್ ಮಜಿಕೋಡಿ ಪಂದ್ಯಾಟವನ್ನು ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್(ರಿ) ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿ’ಸೋಜ ಹಾಗೂ ನೆಹರೂ ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಂ. ಬಾಲಚಂದ್ರ ಗೌಡ ಗೌರವ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ಪಂದ್ಯಾಟಕ್ಕೆ ಶುಭ ಹಾರೈಸಿದರು. ಅಂತಿಮ ಬಿ ಎಸ್ಸಿ ವಿದ್ಯಾರ್ಥಿನಿಯರಾದ ರಶ್ಮಿ ಹಾಗೂ ರೇಷ್ಮಾ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಲೆಫ್ಟಿನೆಂಟ್ ಸೀತಾರಾಮ ಎಂ ಡಿ ಸ್ವಾಗತಿಸಿ, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಶ್ರೀಮತಿ ಮಮತಾ ಕೆ ವಂದಿಸಿದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಭವ್ಯಾ ಪಿ ಎಂ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!