ಸುಳ್ಯ ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ ಸುಳ್ಯ ಕೊಡಿಯಾಲ ಬೈಲು ದಲಿತರ ಕಾಲೋನಿಗೆ ಬಂದ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕೊಡಿಯಾಲಬೈಲು ಹಿಂದೂ ರುದ್ರಭೂಮಿ ಒಳಗಡೆ ಮಾಡಿದ್ದಾರೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಆರೋಪ ಕೇಳಿಬಂದಿದೆ.
ಇದರ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುಂದರ ಪಾಟಾಜೆ, ಹಾಗೂ ಸುಳ್ಯ ತಾಲೂಕು ಸಂಘದ ಅಧ್ಯಕ್ಷ ಪದಾಧಿಕಾರಿಗಳು, ಸ್ಥಳೀಯ ನಿವಾಸಿಗಳನ್ನು ಸೇರಿಸಿ ಇಂದು ತಾಲೂಕು ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿ ನ್ಯಾಯಕ್ಕಾಗಿ ಬೇಡಿಕೆಯನ್ನು ಇಟ್ಟರು.
ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸುಳ್ಯ ತಾಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಈ ಘಟನೆಯ ಕುರಿತು ಮೇಲಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ನಮ್ಮ ವತಿಯಿಂದ ಬೇಕಾದ ಎಲ್ಲ ಮಾಹಿತಿಗಳನ್ನು ಅವರಿಗೆ ನೀಡಿದ್ದೇವೆ. ಉತ್ತರ ಬರುವ ವರೆಗೆ ಕಾಯಬೇಕಾದ ಕಾರಣ ಪ್ರತಿಭಟನೆಯನ್ನು ಕೈಬಿಡಬೇಕೆಂದು ಕೇಳಿಕೊಂಡರು.
ಇದಕ್ಕೆ ಒಪ್ಪಿದ ಸಂಘಟನಾಕಾರರು ಮೇಲಧಿಕಾರಿಗಳ ಉತ್ತರ ಬರುವವರಿಗೆ ಕಾಯುವ ನಿರ್ಧಾರವನ್ನು ತೆಗೆದುಕೊಂಡು ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಕೈ ಬಿಡುತ್ತಿದ್ದೇವೆ ಎಂದು ಮಾಧ್ಯಮದವರಿಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಅಡ್ಕಬಳೆ, ಜಿಲ್ಲಾ ಸಂಚಾಲಕ ಪರಮೇಶ್ವರ ಕೆಮ್ಮಿಂಜೆ, ಹಾಗೂ ಕಾಲೋನಿ ನಿವಾಸಿಗಳುಭಾಗವಹಿಸಿದ್ದರು.