Ad Widget

ತೊಡಿಕಾನ : ಸತ್ಯನಾರಾಯಣ ದೇವರ ಪೂಜೆ ಹಾಗೂ ಒಕ್ಕೂಟ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವ ಉದ್ಯೋಗಕ್ಕೆ ಪೋತ್ಸಾಹ ನೀಡುತ್ತಿದೆ. ಇದರ ಸದುಪಯೋಗವನ್ನು ಸಂಘದ ಎಲ್ಲಾ ಸದಸ್ಯರು ಪಡೆದುಕೊಳ್ಳಬಹುದೆಂದು ಧರ್ಮಸ್ಥಳ ಯೋಜನೆಯ ಉಡುಪಿ ಪ್ರಾದೇಶಿಕ ಕಚೇರಿಯ ನಿರ್ದೇಶಕ ವಸಂತ ಸಾಲಿಯಾನ್ ಅವರು ಹೇಳಿದರು .ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನೆ ಬಿ.ಸಿ. ಟ್ರಸ್ಟ್ ಸಂಪಾಜೆ ವಲಯ , ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅರಂತೋಡು, ತೊಡಿಕಾನ, ಅಡ್ಯಡ್ಕ, ಅರಂಬೂರು, ಗೂನಡ್ಕ, ಕಲ್ಲುಗುಂಡಿ, ದ.ಕ. ಸಂಪಾಜೆ ಹಾಗೂ ಊರವರ ಸಹಕಾರದೊಂದಿಗೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಒಕ್ಕೂಟ ಪದಗ್ರಹಣದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ಯೋಜನಾ ಕಚೇರಿಯ ಯೋಜನಾಧಿಕಾರಿ ನಾಗೇಶ್ ಅವರು ಮಾತನಾಡಿ ದೇವರ ಸೇವೆ ಮತ್ತು ಸಮಾಜ ಸೇವೆ ಮಾಡುವುದರಿಂದ ನಮಗೆ ಒಳಿತಾಗುತ್ತದೆ ಎಂದು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜಕ್ಕೆ ಪೂರಕವಾದ ಕೆಲಸಗಳು ನಡೆಯುತ್ತಿದ್ದು ಈ ಕೆಲಸಗಳನ್ನು ಸರಕಾರ ಅನುಷ್ಠಾನಗೊಳಿಸಲು ಮುಂದಾಗುತ್ತಿದೆ ಎಂದು ಆರಂತೋಡು ತೊಡಿಕಾನ‌ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಹೇಳಿದರು.
ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಅವರು ಮಾತನಾಡಿ ಸತ್ಯನಾರಾಯಣ ದೇವರ ಪೂಜೆ ವಿಷ್ಣುಗೆ ಪ್ರಿಯವಾದ ಪೂಜೆ ಈ ಪೂಜೆಗಳು ತೊಡಿಕಾನ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ನಡೆಯಬೇಕೆಂದು ಹೇಳಿದರು.‌
ಪ್ರಗತಿ ಬಂಧು ಸಂಘದ ಒಕ್ಕೂಟದ ಅಧ್ಯಕ್ಷೆ ವಿನೋದ ಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪಾಜೆ ಸೊಸೈಟಿ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ , ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ , ಅರಂಬೂರು ಮೂಕಾಂಬಿಕಾ ಭಜನಾ ಮಂದಿರದ ಅಧ್ಯಕ್ಷ ರತ್ನಾಕರ ರೈ , ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸಂಪಾಜೆ ವಲಯಾಧ್ಯಕ್ಷ ರಾಧಾಕೃಷ್ಣ ಪೆರುಮುಂಡ ವಿನೋದಕುಮಾರಿ, ರತ್ನಾವತಿ ಅಳಿಕೆ,ಜನಾರ್ದನ ಬಾಳೆಕಜೆ, ಪೂವಯ್ಯ ಚಂದ್ರಶೇಖರ್ ನೆಡ್ಚಿಲು,ಗಣೇಶ್ ಎಸ್‌.ಪಿ,ಲಿಟ್ಟಿ ಟಿ.ಜೆ,ಈಶ್ವರ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ಅಶೋಕ ಪೀಚೆ ಸ್ವಾಗತಿಸಿ , ಐತಪ್ಪ ಬಾಜಿನಡ್ಕ ವಂದಿಸಿದರು. ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!