Ad Widget

ಬೆಂಗಳೂರಿನಲ್ಲಿ ಛಾಯಾ ಸಾಧಕ ಪ್ರಶಸ್ತಿ ಸ್ವೀಕರಿಸಿದ ಸ್ಟುಡಿಯೋ ಗೋಪಾಲ್

ಸುಳ್ಯದಲ್ಲಿ ಹಲವಾರು ವರುಷಗಳಿಂದ ಸ್ಟುಡಿಯೋ ನಡೆಸಿಕೊಂಡು ಬರುತ್ತಿರುವ ಗೋಪಾಲಕೃಷ್ಣ ಕೆ.ಎಸ್ ರವರಿಗೆ ರಾಜ್ಯ ಮಟ್ಟದ ಛಾಯಾ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜೂ.28 ರಂದು ನಡೆದ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ಛಾಯಾ ಚಿತ್ರಗ್ರಾಹಕರ ಸಂಘದ ಅಧ್ಯಕ್ಷ ಪರಮೇಶ್, ಕಾರ್ಯದರ್ಶಿ ಮುರಳಿ ಹಾಗೂ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸುಳ್ಯ ವಲಯ ಫೋಟೋಗ್ರಾಫರ್ ಅಸೋಸಿಯೇಷನ್ ನ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು.ಇವರು ಸುಳ್ಯ ವಲಯ ಫೋಟೋಗ್ರಾಫರ್ ಅಸೋಸಿಯೇಷನ್ ಇದರ ಸ್ಥಾಪಕಾಧ್ಯಕ್ಷರಾಗಿ, ಎಸ್.ಕೆ.ಪಿ.ಜಿಲ್ಲೆಯ ಮಾಜಿ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿರುತ್ತಾರೆ. ಸುಳ್ಯದಲ್ಲಿ ಪ್ರಥಮವಾಗಿ ಗೋಪಾಲ್ ಸ್ಟುಡಿಯೋ ವನ್ನು ಪ್ರಾರಂಭಿಸಿದ ಹೆಗ್ಗಳಿಕೆಗೆ ಪಾತ್ರರಾದವರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading