ಕೇನ್ಯ : ಶ್ರೀ ದುರ್ಗಾ ಸೇವಾ ಸಂಘ ಉಳಿಸಿದ ಕೇನ್ಯ ಇದರ ” ನಮ್ಮೂರ ಶಾಲೆ ಅಭಿಯಾನಕ್ಕೆ ಓಗೊಟ್ಟು ” ಓಮ್ ಶಕ್ತಿ ಸಂಸ್ಥೆ ಕಲ್ಯಾಣ್” ಮುಂಬಯಿ ಇವರಿಂದ ಕೇನ್ಯ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೇನ್ಯ, ನೇಲ್ಯಡ್ಕ ಮತ್ತು ಕನ್ಕಲ್ ಶಾಲೆಗಳಿಗೆ ಸುಮಾರು 1 ಲಕ್ಷದಷ್ಟು ಮೌಲ್ಯದ ಸಮವಸ್ತ್ರ ಮತ್ತು ನೋಟು ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.
ಕೇನ್ಯ ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಓಂ ಶಕ್ತಿ ಮಹಿಳಾ ಸಂಸ್ಥೆ ಯ ಸ್ಥಾಪಕಧ್ಯಕ್ಷೆ ಚಿತ್ರಾ ಆರ್ ಶೆಟ್ಟಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆ ಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮ ಎಸ್ ರೈ ಕೇನ್ಯ ಹೊಸಮನೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಓಂ ಶಕ್ತಿ ಮಹಿಳಾ ಸಂಸ್ಥೆ ಯ ಅಧ್ಯಕ್ಷರಾದ ಶ್ರೀಮತಿ ಸುಚಿತಾ ಜೆ ಶೆಟ್ಟಿ, ಉಪಾಧ್ಯಕ್ಷರಾದ ಶ್ರೀಮತಿ ಜಯಶ್ರೀ ಕೆ ಶೆಟ್ಟಿ, ಜಂಟಿ ಕಾರ್ಯದರ್ಶಿ ಶ್ರೀಮತಿ ಯಶೋಧ ಎಸ್ ಶೆಟ್ಟಿ, ಸದಸ್ಯರಾದ ಶ್ರೀಮತಿ ಶ್ವೇತಾ ಎಸ್ ಶೆಟ್ಟಿ, ಶ್ರೀದುರ್ಗ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಪದ್ಮನಾಭ ರೈ ಆಗೋಲಿಬೈಲು ಗುತ್ತು, ಶಾಲಾ ಮುಖ್ಯ ಶಿಕ್ಷಕಿ ಕು.ರೇವತಿ, ಎಸ್.ಡಿ.ಯಂ.ಸಿ ಅಧ್ಯಕ್ಷ ಶ್ರೀ ಪುಟ್ಟಣ್ಣ ಗೌಡ ಕುಂಜಾತ್ತಾಡಿ ಉಪಸ್ಥಿತರಿದ್ದರು. ಶ್ರೀ ದುರ್ಗಾ ಸೇವಾ ಸಂಘದ ವತಿಯಿಂದ ಓಂ ಶಕ್ತಿ ಮಹಿಳಾ ಸಂಘದ ಅಧ್ಯಕ್ಷರು ಮತ್ತು ಸದಸ್ಯರನ್ನು ಸನ್ಮಾನಿಸಲಾಯಿತು. ಹಾಗೂ ಶಾಲಾ ಶಿಕ್ಷಕ ವೃಂದ ಮತ್ತು ಎಸ್.ಡಿ.ಯಂ.ಸಿ ಯವರಿಂದ ಓಂ ಶಕ್ತಿ ಮಹಿಳಾ ಸಂಸ್ಥೆ ಯವರನ್ನು ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.
ಶಾಲಾ ಸಹ ಶಿಕ್ಷಕಿ ಶ್ರೀಮತಿ ಅಂಕಿತ ಸ್ವಾಗತಿಸಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿನ್ಯಾಸ್ ರೈ ವಂದಿಸಿದರು. ದುರ್ಗಾ ಸೇವಾ ಸಂಘದ ಕಾರ್ಯದರ್ಶಿ ದೇವಿಪ್ರಸಾದ್ ರೈ ಗೆಜ್ಜೆ ಕಾರ್ಯಕ್ರಮ ನಿರೂಪಿಸಿದರು.