Ad Widget

ಜುಲೈ 30 ರವರೆಗೆ ಮೀನು ಹಿಡಿಯುವುದಕ್ಕೆ ನಿಷೇಧ

ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ದಿ ಚಟುವಟಿಕೆಗಳು ನಡೆಯುವುದರಿಂದ ಪ್ರತೀ ವರ್ಷ ಜೂನ್ 1 ರಿಂದ ಜುಲೈ, 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತೀ ಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಫೀಳಿಗೆಗೆ ತಮ್ಮ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಸಾರ್ವಜನಿಕರು ಹಾಗೂ ಮೀನುಗಾರರು ಮೀನುಗಳನ್ನು ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣೆಯಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಕೋರಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!