ಸರ್ಕಾರದ ವ್ಯವಹಾರ ಮತ್ತು ಯಾವುದೇ ಪ್ರಮಾಣ ಪತ್ರದಲ್ಲಿ ಪರಿಶಿಷ್ಟ ಜಾತಿಯವರಿಗೆ ದಲಿತ ಎಂಬ ಪದವನ್ನು ಬಳಸಬಾರದು ಎಂದು ಈ ಹಿಂದೆಯೇ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.
ಇದೀಗ, ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರ ವ್ಯವಹಾರ, ಪ್ರಮಾಣ ಪತ್ರಗಳಲ್ಲಿ ‘ದಲಿತ’ ಎನ್ನುವ ಪದವನ್ನು ಬಳಸದಂತೆ ಸಮಾಜ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ.
ಈ ಕುರಿತು ಕರ್ನಾಟಕ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸೂಚನೆಯಂತೆ ಇನ್ಮುಂದೆ ದಲಿತ ಪದ ಬಳಸುವಂತಿಲ್ಲ ಎಂದಿದ್ದಾರೆ.
ಇನ್ನು ಹರಿಜನ ಮತ್ತು ಗಿರಿಜನ ಎನ್ನುವ ಪದವನ್ನು ಬಳಕೆ ಮಾಡಬಾರದು ಎಂದು ಸೂಚಿಸಲಾಗಿದೆ. ಆಂಗ್ಲ ಭಾಷೆಯಲ್ಲಿ ಎಸ್‌ಸಿ/ಎಸ್‌ಟಿ ಎಂದು ನಮೂದಿಸಬಹುದು ಹಾಗೂ ಇತರೇ ಭಾಷೆಗಳಲ್ಲಿ ಸೂಕ್ತ ಭಾಷಾಂತರಗೊಳಿಸಿದ ಪದವನ್ನು ಬಳಸಬೇಕು ಎಂದು ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಎಂದು ನಮೂದಿಸಬಹುದಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.
- Saturday
- November 23rd, 2024