
ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ದೆಹಲಿ ಪ್ರವಾಸದಲ್ಲಿರುವ ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಬಂದರು, ಹಾಗೂ ಜಲಮಾರ್ಗಗಳ ಸಚಿವರಾದ ಸರ್ಬಾನಂದ ಸೋನೊವಾಲ ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ರಾಜ್ಯ ಸಚಿವರಾದ ಡಾ.ಎಲ್.ಮುರುಗನ್ ರವರನ್ನು ಭೇಟಿ ಮಾಡಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಬಗ್ಗೆ ಕೇಂದ್ರದಲ್ಲಿ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಮಲ್ಲಿಕಾರ್ಜುನ ಹಾಗೂ ಸಲಹೆಗಾರರಾದ ಅರುಣ್ ಬೆಂಗಳೂರು.