Ad Widget

ಹರಿಹರ ಪಲ್ಲತ್ತಡ್ಕ :- ಗ್ರಾಮ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2021-22 ನೇ ಸಾಲಿನ ಅಕ್ಟೋಬರ್ ನಿಂದ 2022-23 ನೇ ಮಾರ್ಚ್ ತನಕದ ಸಾಮಾಜಿಕ ಪರಿಶೋಧನಾ ವರದಿ ಮತ್ತು 14 ಮತ್ತು 15 ನೇ ಹಣಕಾಸು ಯೋಜನೆಯ ಗ್ರಾಮ ಸಭೆಯು ಜು.27 ರಂದು ಗ್ರಾಮ ಪಂಚಾಯತ್ ಕಛೇರಿ ಸಭಾಭವನದಲ್ಲಿ ನಡೆಯಿತು.

ಗ್ರಾಮ ಸಭೆಯ ನೋಡೆಲ್ ಅಧಿಕಾರಿಗಳಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುಳ್ಯ ಇಲ್ಲಿನ ಶಿಶು ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಭವ್ಯ.ಎನ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಬಿಂದು.ಪಿ, ಶಿಲ್ಪಾ ಕೊತ್ನಡ್ಕ, ಪದ್ಮಾವತಿ ಕಲ್ಲೇಮಠ ಇವರುಗಳು ಉಪಸ್ಥಿತರಿದ್ದರು. ಹಾಗೂ ಸಭೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!