ಗ್ರಾಮ ಪಂಚಾಯತ್ ಗುತ್ತಿಗಾರು, ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಗುತ್ತಿಗಾರು ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ – 1837ರ ಉಪನ್ಯಾಸ ಮಾಲಿಕೆಯ ಮೂರನೇ ಉಪನ್ಯಾಸ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರುನಲ್ಲಿ ನಡೆಸಲಾಯಿತು.
ಕಾಲೇಜು ಪ್ರಾಂಶುಪಾಲೆ ಚೆನ್ನಮ್ಮ ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಶೋಧಕ ಎ.ಕೆ ಹಿಮಕರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿದರು. ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ನೆಲ್ಸನ್ ಕ್ಯಾಸ್ಟಲಿನೊ, ಯುವಕ ಮಂಡಲದ ಉಪಾಧ್ಯಕ್ಷ, ಕುಕ್ಕನ್ನೂರು ಚೆನ್ನಯ್ಯ ಗೌಡರ ವಂಶಸ್ಥ ವೆಂಕಟೇಶ್ ನಡುಬೆಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯುವಕ ಮಂಡಲದ ಅಧ್ಯಕ್ಷ ಶಶಿಪ್ರಸಾದ್ ಕಾಟೂರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಯುವಕ ಮಂಡಲದ ಜೊತೆ ಕಾರ್ಯದರ್ಶಿ ಪ್ರವೀಣ ಕಾಟೂರು ನಿರೂಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಪದಾಧಿಕಾರಿಗಳಾದ ಸುಭಾಷ್ ರೈ ಕುಕ್ಕಂದೂರು, ನಿತಿನ್ ಕುಮಾರ್ ಅರ್ಭಡ್ಕ, ಲಕ್ಷ್ಮೀನಾರಾಯಣ ಬೊಳುಬೈಲು ಹಾಗೂ ಕಾಲೇಜು ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.