ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಇಂದು ಸಂಸತ್ತಿನಲ್ಲಿ ಭೇಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರು ನಮ್ಮ ಕಾರ್ಯಕರ್ತ ಶ್ರೀ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಕೇಸನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದುದಕ್ಕಾಗಿ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಕೇರಳದ ಗಡಿಪ್ರದೇಶವಾದ ಕರಾವಳಿ ಪ್ರದೇಶಗಳಲ್ಲಿ ರಾಷ್ಟ್ರ ವಿರೋಧಿ ಚಟುವಟಿಕೆಗಳು ಹೆಚ್ಚಾಗಿದ್ದು, ಇವುಗಳ ಮೇಲೆ ವಿಶೇಷ ನಿಗಾ ವಹಿಸಲು ಬೆಂಗಳೂರಿನ ರಾಷ್ಟ್ರೀಯ ತನಿಖಾ ದಳದ ಕಚೇರಿಯನ್ನು ಬಲಪಡಿಸುವಂತೆ ಕೋರಲಾಯಿತು.