ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡುವ 2021-22ನೇ ಸಾಲಿನ ವಿಶಿಷ್ಟ ಸಾಧನಾ ಪ್ರಶಸ್ತಿಗೆ ಸುಳ್ಯದ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ಆಯ್ಕೆಯಾಗಿದೆ.
ಕಳೆದ 24 ವರ್ಷಗಳಿಂದ ಕಾರ್ಯಚರಿಸುತ್ತಿರುವ ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆ ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಪ್ರಶಸ್ತಿಯನ್ನು ಅಗಸ್ಟ್ 5 ರಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಂಗಳೂರಿನ ಕೊಡಿಯಾಲ ಬೈಲ್ ಪ್ರಧಾನ ಕಚೇರಿಯಲ್ಲಿ ಸ್ವೀಕರಿಸಲಾಗುವುದು ಎಂದು ಸುಳ್ಯ ಅಲ್ಪಸಂಖ್ಯಾತರ ಸೊಸೈಟಿ ಅಧ್ಯಕ್ಷ ಇಕ್ಬಾಲ್ ಎಲಿಮಲೆ ತಿಳಿಸಿದ್ದಾರೆ.