2021-22ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ/ಸ್ನಾತಕೋತರ ಪದವಿ/ಮೆಡಿಕಲ್ /ಇಂಜಿನಿಯರಿಂಗ್ ಇತರ ಕೋರ್ಸುಗಳಲ್ಲಿ ಶೇಕಡಾ 60% ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀಣರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅಂತರ್ಜಾಲದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು ಸಲ್ಲಿಸಿದ ನಂತರ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗಾಗಿ ಅರ್ಜಿಯನ್ನು, ಅಗತ್ಯ ದಾಖಲೆಗಳೊಂದಿಗೆ ಲಗತ್ತಿಸಿ ಸಹಾಯಕ ನಿರ್ದೇಶಕರು (ಗ್ರೇಡ್-2) ಕಲ್ಯಾಣ ಇಲಾಖೆ, ಸುಳ್ಯ ತಾಲೂಕು ಕಛೇರಿಗೆ ಸಲ್ಲಿಸುವಂತೆ ಪ್ರಕಟಣೆ ಮೂಲಕ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 08257-233527 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.
- Thursday
- November 21st, 2024