ಮೊನ್ನೆ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ ಸಂಭವಿಸಿದ್ದು, ಆ.09 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು, ಜನಜಾಗೃತಿ ಪ್ರದೇಶದ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ತಾಲೂಕು ಹಾಗೂ ಸುಬ್ರಹ್ಮಣ್ಯ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇವುಗಳ ವತಿಯಿಂದ ಬೃಹತ್ ಶ್ರಮದಾನ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ಹಾಗೂ ಸುಳ್ಯ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಂಡಗಳು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸದಸ್ಯರುಗಳು ಶ್ರಮಸೇವೆಯಲ್ಲಿ ಕೈ ಜೋಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ತೆಂಗಿನಕಾಯಿ ಒಡೆಯುವ ಮೂಲಕ ಶ್ರಮಸೇವೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಪಿಡಿಓ ಪುರುಷೋತ್ತಮ ಮಣಿಯಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಕೃಷಿ ಅಧಿಕಾರಿ ರಮೇಶ್, ವಿಪತ್ತು ನಿರ್ವಹಣಾ ಯೋಜನಾಧಿಕಾರಿಗಳಾದ ಜೈವಂತ ಪಟಾಗರ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಭಾಳುಗೋಡು, ಉಪಾಧ್ಯಕ್ಷರಾದ ವಿಜಯ ಅಂಙಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ರಾಜೇಶ್ ಹಾಗೂ ಸೇವಾಪ್ರತಿನಿಧಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ